ಮಂಗಳೂರು : ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣವನ್ನು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಯಾವನೋ ಒಬ್ಬ ರೌಡಿ ಹೊಡಿತಾನೆ ಅಂದರೆ ಏನೆನ್ನಬೇಕು..? ಹಾಡಹಗಲೇ ಇಂತಹ ಘಟನೆ ನಡೆದರೆ ಏನೆನ್ನಬೇಕು. ಪೊಲೀಸ್ ಇಲಾಖೆ ಧೈರ್ಯ, ರಕ್ಷಣೆ ಕೊಡುವ ಕೆಲಸ ಮಾಡಬೇಕು.
ಬೆಳಗ್ಗೆ ಜೈಲಿಗೆ ಹೋಗಿ ಸಂಜೆ ಬೇಲ್ ನಲ್ಲಿ ಬರ್ತಾರೆ ಅಂದರೆ ಏನೆನ್ನಬೇಕು..? ಪೊಲೀಸ್ ಇಲಾಖೆ ಯಾಕೆ ಕಠಿಣ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದ ಅವರು, ಆಡಳಿತ ಪಕ್ಷದ ರಾಜಕೀಯಕ್ಕೆ ಪೊಲೀಸ್ ಇಲಾಖೆ ಮಣಿಯಬಾರದು. ಯಾರೇ ರೌಡಿಗಳು, ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಅಶಾಂತಿ ಸೃಷ್ಟಿಸುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ ಅವರು, ಜನರು ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದಾರೆ ಅಂದರು. ಇನ್ನು ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಹಾನಗಲ್, ಸಿಂಧಗಿಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಸಮಾಜ, ದೇಶ ಕಟ್ಟಲು ಕಾಂಗ್ರೆಸ್ ಅಗತ್ಯವಿದೆ ಎಂದು ಜನರು ಅರಿತಿದ್ದಾರೆ. ಹೀಗಾಗಿ ಜನರು ಕಾಂಗ್ರೆಸನ್ನು ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Kshetra Samachara
29/09/2021 12:39 pm