ಉಡುಪಿ: ಉಡುಪಿ ನಗರಸಭೆಯ ಸಾಮಾನ್ಯ ಸಭೆ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ನಡೆಯಿತು.
ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ನಗರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು.
ಸಭೆಯಲ್ಲಿ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ನಗರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಜೊತೆಗೆ ಮುಖ್ಯಮಂತ್ರಿ ಆರೋಗ್ಯ ವಿಮಾ ಯೋಜನೆಯ ಕಾರ್ಡನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಪೌರಾಯುಕ್ತರಾದ ಉದಯ್ ಶೆಟ್ಟಿ, ನಗರ ಸಭೆಯ ಸದಸ್ಯರು ಮತ್ತು ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
29/09/2021 03:09 pm