ಬೈಂದೂರು : ಕುಂದಾಪುರ ತಾಲ್ಲೂಕಿನ ಗಂಗೊಳ್ಳಿಯಲ್ಲಿ ಗೋಹತ್ಯೆ ವಿರೋಧಿಸಿ ಗೋಹಂತಕರನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಇಂದು ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಸಭೆ ನಡೆಸಿದರು .
ಗಂಗೊಳ್ಳಿ ಮುಖ್ಯ ರಸ್ತೆಯಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಶಾಂತಿಯುತ ಪ್ರತಿಭಟನೆ ಮಾಡಿ ಕೆಲವೆಡೆ ಬಂದ್ ಆಚರಣೆ ನಡೆದಿದೆ .
ಗಂಗೊಳ್ಳಿ ಮೀನುಗಾರಿಕಾ ಬಂದರಿನಿಂದ ಹೊರಟಿರುವ ಸಾವಿರಾರು ಕಾರ್ಯಕರ್ತರು ರಾಮ ಮಂದಿರವರೆಗೆ ಕಾಲ್ನಡಿಗೆಯ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಹೌದು ಉಡುಪಿ ಜಿಲ್ಲೆ ಹಿಂದೂ ಜಾಗರಣ ವೇದಿಕೆ ಪ್ರಮುಖರು ಗಂಗೊಳ್ಳಿ ವೀರೇಶ್ವರ ದೇವಸ್ಥಾನದಲ್ಲಿ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕುಂದಾಪುರ ತಹಸೀಲ್ದಾರ್ ಕಿರಣ್ ಬೋರಯ್ಯಯವರಿಗೆ ಮನವಿ ಪತ್ರ ಸಲ್ಲಿಸಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಗೋ ಹತ್ಯೆ ವಿರೋಧಿಸಿ ಗೋಹಂತಕರನ್ನು ತಕ್ಷಣ ಬಂಧಿಸುವಂತೆ ಕಾರ್ಯಕರ್ತರು ಮನವಿ ಮಾಡಿದರು .
ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಪೋಲಿಸರನ್ನು ನಿಯೋಜಿಸಲಾಗಿತ್ತು.
Kshetra Samachara
01/10/2021 03:45 pm