ಉಡುಪಿ:ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಆಶಯದಂತೆ ಹಾಗೂ ರಾಜ್ಯ ಸರಕಾರದ ಸೂಚನೆಯಂತೆ ಗಾಂಧಿ ಜಯಂತಿ ಪ್ರಯುಕ್ತ ಖಾದಿ ಉತ್ಪನ್ನಗಳನ್ನು ಬಳಕೆ ಮಾಡಲು ವ್ಯಾಪಕ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಇಂದು ಉಡುಪಿ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾದ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಕಾರ್ಯಕ್ರಮವನ್ನು ಶಾಸಕರಾದ ಕೆ. ರಘುಪತಿ ಭಟ್ ರವರು ಉದ್ಘಾಟಿಸಿ ಖಾದಿ ಉತ್ಪನ್ನವನ್ನು ಖರೀದಿಸುವ ಮೂಲಕ ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್ ಹಾಗೂ ನಗರ ಸಭೆಯ ಸದಸ್ಯರು ಮತ್ತು ಉಪಸ್ಥಿತರಿದ್ದರು.
Kshetra Samachara
02/10/2021 09:39 am