ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾಯರು ಗ್ರಾಮದ 2ನೇ ವಾರ್ಡಿನ ಸುಖಾನಂದ ನಗರದ ಹತ್ತಿರದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸುತ್ತಿದ್ದು, ಅಭಿವೃದ್ಧಿಯೇ ಸರ್ಕಾರದ ಮೂಲಮಂತ್ರವಾಗಿದೆ ಎಂದರು.
ತಾ.ಪಂ ಮಾಜಿ ಸದಸ್ಯ ಜೀವನ್ ಪ್ರಕಾಶ್, ಪಡುಪಣಂಬೂರು ಗ್ರಾ.ಪಂ. ಉಪಾಧ್ಯಕ್ಷೆ ಕುಸುಮ, ಸದಸ್ಯರಾದ ಹರಿಪ್ರಸಾದ್ ಕೊಲ್ನಾಡು, ಸಂತೋಷ್ ಕುಮಾರ್, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಶ್ರೀ ಗಜಾನನ ಸ್ಪೋರ್ಟ್ಸ್ ಕ್ಲಬ್ ತೋಕೂರು ಅಧ್ಯಕ್ಷ ನವೀನ್ ಶೆಟ್ಟಿಗಾರ್ ಹಾಗೂ ಸದಸ್ಯರು, ಹಿರಿಯರಾದ ಬಾಲಕೃಷ್ಣ ಶೆಟ್ಟಿಗಾರ್ ಉಪಸ್ಥಿತರಿದ್ದರು.
Kshetra Samachara
03/10/2021 03:37 pm