ಕೊಲ್ಲೂರು: ನಿನ್ನೆಯಿಂದ ಕರಾವಳಿ ಪ್ರವಾಸದಲ್ಲಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕುಟುಂಬ ಸಮೇತರಾಗಿ ಇವತ್ತು ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ದೇವಸ್ಥಾನದ ಆಡಳಿತ ಮಂಡಳಿ ಆತ್ಮೀಯವಾಗಿ ಸ್ವಾಗತಿಸಿತು.ಬಳಿಕ ಸಚಿವರು ಕುಟುಂಬ ಸಮೇತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.ನಂತರ ದೇವಳದಲ್ಲಿ ನಡೆದ ವಿಶೇಷ ಚಂಡಿಕಾ ಹೋಮದಲ್ಲಿ ಭಾಗಿಯಾದರು.
Kshetra Samachara
07/10/2021 12:55 pm