ಮಂಗಳೂರು: ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇದೀಗ ಮಂಗಳೂರಿನ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ್ದಾರೆ. ಮೈಸೂರಿನಿಂದ ವಿಶೇಷ ವಿಮಾನದ ಮೂಲಕ 6.45ಕ್ಕೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಅವರಿಗೆ ಜಿಲ್ಲಾಡಳಿತದಿಂದ ಸ್ವಾಗತ ನೀಡಲಾಯಿತು. ರಾಷ್ಟ್ರಪತಿಗಳೊಂದಿಗೆ ರಾಜ್ಯಪಾಲರು ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ಹೊರಟ ಅವರು 7.15 ಕ್ಕೆ ಮಂಗಳೂರಿನ ಸರ್ಕ್ಯೂಟ್ ಹೌಸ್ ತಲುಪಿದರು. ರಾತ್ರಿ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯವಿರಲಿರುವ ರಾಷ್ಟ್ರಪತಿಯವರು ನಾಳೆ ಬೆಳಗ್ಗೆ ಶೃಂಗೇರಿಗೆ ಹೊರಡಲಿದ್ದಾರೆ.
ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ಸರ್ಕ್ಯೂಟ್ ಹೌಸ್ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿಯನ್ನು ಕೊಂಚ ಕಾಲ ಸ್ಥಗಿತಗೊಳಿಸಲಾಗಿತ್ತು.
Kshetra Samachara
07/10/2021 08:22 pm