ಮಂಗಳೂರು: ನಿನ್ನೆ ಸಂಜೆಯಿಂದ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯವಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತವರ ಕುಟುಂಬ ಮತ್ತು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಶೃಂಗೇರಿಗೆ ಪ್ರಯಾಣ ಬೆಳೆಸಿದ್ದಾರೆ.
ಉಪಾಹಾರ ಮುಗಿಸಿ ಬೆಳಗ್ಗೆ 10.30ರ ಸುಮಾರಿಗೆ ಭಾರಿ ಬಿಗಿ ಭದ್ರತಾ ವಾಹನದೊಂದಿಗೆ ಝೀರೋ ಟ್ರಾಫಿಕ್ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರು ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊರಟರು. 10.45ಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಹೊರಟ ಅವರು 11.30ಕ್ಕೆ ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಇಳಿಯಲಿದ್ದಾರೆ.
ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಶೃಂಗೇರಿ ಶ್ರೀ ಶಾರದಾ ಮಾತೆಯ ದರ್ಶನ ಪಡೆದು, ಮತ್ತೆ ಸಂಜೆ 4.20ಕ್ಕೆ ಶೃಂಗೇರಿ ಹೆಲಿಪ್ಯಾಡ್ ಗೆ ಆಗಮಿಸಿ ಹೆಲಿಕಾಪ್ಟರ್ ಮೂಲಕ 4.55ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಸಂಜೆ 5.10ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು 8.10ಕ್ಕೆ ದೆಹಲಿ ತಲುಪಲಿದ್ದಾರೆ.
Kshetra Samachara
08/10/2021 11:33 am