ಉಡುಪಿ: ಇಂದು ಉಡುಪಿಗೆ ಆಗಮಿಸಿದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಶಾಸಕ ಶ್ರೀ ಕೆ ರಘುಪತಿ ಭಟ್ ಅವರೊಂದಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಚಿವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಉದಯಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.
Kshetra Samachara
09/10/2021 01:54 pm