ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: 'ಕಾಶ್ಮೀರಿ ಪಂಡಿತರೊಂದಿಗೆ ನಾವಿದ್ದೇವೆ'

ಪುತ್ತೂರು: ಕಾಶ್ಮೀರದಲ್ಲಿ ನಡೆದ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳವು ಪ್ರತಿಭಟನಾ ಸಭೆಯನ್ನು ಪುತ್ತೂರು ಮಿನಿ ವಿಧಾನ ಸೌಧದ ಬಳಿಯ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು, ಮತಾಂಧ ಜಿಹಾದಿಗಳಿಂದ ಆಗುತ್ತಿರುವ ದೌರ್ಜನ್ಯವನ್ನು ಇಡೀ ದೇಶದ ಹಿಂದೂ ಸಂಘಟನೆಗಳು ಖಂಡಿಸುತ್ತಿದ್ದು, ಕಾಶ್ಮೀರಿ ಪಂಡಿತರೊಂದಿಗೆ ನಾವಿದ್ದೇವೆ ಎಂಬ ಸಂದೇಶ ನೀಡುವುದಕ್ಕೆ ಈ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ ಸರಕಾರ ತಕ್ಷಣ ಅಲ್ಲಿನ ಮೂಲ ನಿವಾಸಿಗಳಿಗೆ ರಕ್ಷಣೆ ಒದಗಿಸಬೇಕಾದ ಅಗತ್ಯವಿದೆ ಎಂದರು.

Edited By : Nagesh Gaonkar
Kshetra Samachara

Kshetra Samachara

09/10/2021 04:55 pm

Cinque Terre

15.47 K

Cinque Terre

4

ಸಂಬಂಧಿತ ಸುದ್ದಿ