ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಿರುವೈಲು: ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ; ಡಾ.ಭರತ್ ಶೆಟ್ಟಿ

ಬಜಪೆ: ಗ್ರಾಮೀಣ ಪ್ರದೇಶದಲ್ಲಿ ರಸ್ತೆ ಅಭಿವೃದ್ಧಿಗೆ ಸರ್ಕಾರ ಪ್ರಥಮ ಆದ್ಯತೆ ನೀಡುತ್ತಿದೆ ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.

ಮ.ನ.ಪಾ 20ನೇ ತಿರುವೈಲು ವಾರ್ಡ್‍ನ ಒಂದನೇ ಅಡ್ಡರಸ್ತೆಯ 'ಶಿವಂ ಫ್ರೆಂಡ್ಸ್ ಕ್ಲಬ್' ಪಕ್ಕದ ರಸ್ತೆ ಹಾಗೂ ಒಳಚರಂಡಿ ಅಭಿವೃದ್ಧಿ ಕಾಮಗಾರಿಗೆ ಅವರು ಇಂದು ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಒಟ್ಟು 40 ಲಕ್ಷ ರೂ. ಅನುದಾನದಲ್ಲಿ ನಡೆಯಲಿರುವ ಕಾಮಗಾರಿ ಇದಾಗಿದೆ.

ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಹೇಮಲತಾ ರಘು ಸಾಲ್ಯಾನ್, ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್, ಮಂಗಳೂರು ನಗರ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೇಣವ, ಮುಖಂಡರಾದ ಲಕ್ಷ್ಮಣ್ ಶೆಟ್ಟಿಗಾರ, ಓಂಪ್ರಕಾಶ್ ಶೆಟ್ಟಿ ವಾಮಂಜೂರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/10/2021 05:17 pm

Cinque Terre

3.02 K

Cinque Terre

0

ಸಂಬಂಧಿತ ಸುದ್ದಿ