ಕುಂದಾಪುರ: ಬಿದ್ಕಲ್‍ಕಟ್ಟೆಯ ನಾಗಲಕ್ಷ್ಮೀ ಸಭಾಭವನದಲ್ಲಿ ಬಿಜೆಪಿ ಯುವ ಮೋರ್ಚಾ ಕುಂದಾಪುರ ಮಂಡಲದ ವತಿಯಿಂದ ಪ್ರಧಾನಿ ಮೋದಿ ಅವರ 71ನೇ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮ ನಡೆಯಿತು. ಈ ಪ್ರಯುಕ್ತ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ನೇತ್ರದಾನ, ರಕ್ತದಾನ, ಕಣ್ಣಿನ ಚಿಕಿತ್ಸೆ ಮತ್ತು ಕನ್ನಡಕ ವಿತರಣೆ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ರಕ್ತನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು ವಹಿಸಿದ್ದರು.ಈ ಸಂದರ್ಭದಲ್ಲಿ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಮಂಡಳದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಉಡುಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ವೈದ್ಯಕೀಯ ನಿರ್ದೇಶಕ ನಾಡೋಜ ಡಾ.ಕೃಷ್ಣ ಪ್ರಸಾದ್ ಕೂಡ್ಲು, ಪ್ರಸಾದ ನೇತ್ರಾಲಯದ ಕಣ್ಣಿನ ತಜ್ಞೆ ಡಾ. ಸೀಮಾ, ಕುಂದಾಪುರ ರೆಡ್ ಕ್ರಾಸ್ ರಕ್ತ ನಿಧಿ ಕೇಂದ್ರದ ಅಧ್ಯಕ್ಷ ಜಯಕರ ಶೆಟ್ಟಿ, ಕುಂದಾಪುರ ಮಂಡಳದ ಪ್ರ.ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ನಿಕಟಪೂರ್ವ ಮಂಡಳದ ಅಧ್ಯಕ್ಷ ಕಾಡೂರ್ ಸುರೇಶ್ ಶೆಟ್ಟಿ, ಹಾಲಾಡಿ ಯುವಮೋರ್ಚಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುದೀಪ್ ಶೆಟ್ಟಿ ಬೆಳ್ವೆ, ಉಪಸ್ಥಿತರಿದ್ದರು.
Kshetra Samachara
10/10/2021 01:51 pm