ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ

ಕೋಟ: ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು.

ಮೈಸೂರಿನ ನಂಜನಗೂಡಿನಲ್ಲಿ ರಾಜ್ಯ ಸರಕಾರ ಹಿಂದೂ ದೇವಸ್ಥಾನ ತೆರವು ಮಾಡಿದ್ದನ್ನು ಖಂಡಿಸಿ ಪಂಜಿನ ಮೆರವಣಿಗೆ ಆಯೋಜಿಸಲಾಗಿತ್ತು.

ಮೆರವಣಿಗೆ ಸಂದರ್ಭ ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿ ವಿರೋಧಿಸಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.ಇದಕ್ಕೂ ಮುನ್ನ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು.

ಕೋಟ ಬ್ಲಾಕ್ ಕಾಂಗ್ರೆಸ್ ಕಛೇರಿಯಿಂದ ಹೊರಟ ಮೆರವಣಿಗೆ ರಾಷ್ಟ್ರೀಯ ಹೆದ್ದಾರಿ 66 ರ ಮೂಲಕ ಸಾಗಿ ಬಂತು.

Edited By :
Kshetra Samachara

Kshetra Samachara

10/10/2021 07:56 pm

Cinque Terre

9.99 K

Cinque Terre

1

ಸಂಬಂಧಿತ ಸುದ್ದಿ