ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗ್ರಾಮೀಣ ಬಂಟರ ಸಂಘದ ಕನ್ವೆನ್ಶನ್ ಸೆಂಟರ್ ಉದ್ಘಾಟಿಸಿದ ಸಿಎಂ

ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಕನ್ವೆನ್ಶನ್ ಸೆಂಟರ್ ಮತ್ತು ಕೌಶಲ್ಯ ತರಬೇತಿ ಕೇಂದ್ರವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಸಿ.ಎಂ.ಡಿ, ಎಂ.ಆರ್.ಜಿ ಗ್ರೂಪ್ ನ ಕೆ. ಪ್ರಕಾಶ್ ಶೆಟ್ಟಿ, ಮಾಹೆ ಮಣಿಪಾಲದ ಸಹಕುಲಾಧಿಪತಿಗಳಾದ ಹೆಚ್. ಎಸ್ ಬಲ್ಲಾಳ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/10/2021 05:04 pm

Cinque Terre

4.15 K

Cinque Terre

0

ಸಂಬಂಧಿತ ಸುದ್ದಿ