ಮಲ್ಪೆ: ಕೇಂದ್ರ ಸರಕಾರದ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಸಚಿವ ಎಲ್. ಮುರುಗನ್ ಇಂದು ಮಲ್ಪೆ ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಸಚಿವರು ಮೀನುಗಾರರ ಅಹವಾಲುಗಳನ್ನು ಸ್ವೀಕರಿಸಿದರು.ಈ ಸಂದರ್ಭ ಸಚಿವರ ಜೊತೆ ಶಾಸಕ ಕೆ ರಘುಪತಿ ಭಟ್ ಕೆಲ ಹೊತ್ತು ಮೀನುಗಾರರೊಂದಿಗೆ ಮೀನುಗಾರಿಕಾ ಬೊಟ್ ನಲ್ಲಿ ಸಂಚರಿಸಿದರು.
ಈ ಸಂದರ್ಭದಲ್ಲಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ ಹಾಗೂ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ ಮತ್ತು ಮೀನುಗಾರರ ಸಂಘದ ಪದಾಧಿಕಾರಿಗಳು, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
17/10/2021 06:56 pm