ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯಾದ್ಯಂತ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆಯ ಕಾರ್ಯಕ್ರಮದ ಅಂಗವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ಪುಣಚ ಮಹಾಶಕ್ತಿ ಕೇಂದ್ರದ ಮಾಣಿಲ, ಪೆರುವಾಯಿ, ಪುಣಚ ಶಕ್ತಿಕೇಂದ್ರಗಳಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷರು ಮತ್ತು ಬಿಜೆಪಿ ಪುಣಚ ಮಹಾಶಕ್ತಿಕೇಂದ್ರದ ಸಂಚಾಲಕರಾದ ಹರಿಪ್ರಸಾದ್ ಯಾದವ್, ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಅರುಣ್ ವಿಟ್ಲ, ಮುಕುಂದ ಬಜತ್ತೂರು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪುರುಷೋತ್ತಮ ಮುಂಗ್ಲಿಮನೆ ಉಪಸ್ಥಿತರಿದ್ದರು.
Kshetra Samachara
20/10/2021 11:49 am