ಉಡುಪಿ: ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಮತ್ರು ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಇಂದು ಪ್ರತಿಭಟನೆ ನಡೆಯಿತು.ಭಜರಂಗದಳ ಮತ್ತು ವಿಶ್ವಹಿಂದೂ ಪರಿಷದ್ ಜಂಟಿಯಾಗಿ ನಗರದ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಎದುರು ಪ್ರತಿಭಟನೆ ನಡೆಸಿತು.ಈ ವೇಳೆ ಬಾಂಗ್ಲಾದಲ್ಲಾಗುತ್ತಿರುವ ದೌರ್ಜನ್ಯ ದ ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಡಿಸಿದರು.ಈ ವೇಳೆ ಮಾತನಾಡಿದ ಮುಖಂಡರು ,ಬಾಂಗ್ಲಾದಲ್ಲಿ ಹಿಂದೂ ದೇವಾಲಯ ಮತ್ತು ಮನೆಗಳನ್ನು ಗುರಿಯಾಗಿರಿಸಿ ದಾಳಿ ನಡೆಸಲಾಗುತ್ತಿದೆ.ಇದು ಖಂಡನೀಯ.ಇಂತಹ ಘಟನೆಗಳನ್ನು ಸಹಿಸಿಕೊಳ್ಳಲು ಆಗದು.ಅವರಿಗೆ ನೈತಿಕ ಸ್ಥೈರ್ಯ ತುಂಬುವ ಸಲುವಾಗಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
Kshetra Samachara
20/10/2021 05:45 pm