ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಸಂಬಳ ನೀಡುವಂತೆ ಒತ್ತಾಯಿಸಿ ಕೆಎಸ್ಆರ್ ಟಿಸಿ ನೌಕರರಿಂದ ಧರಣಿ

ಪುತ್ತೂರು: ಸಂಬಳ ನೀಡದೆ ಸತಾಯಿಸುತ್ತಿರುವ ಕೇಂದ್ರ ಕಚೇರಿಯ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ. ನೌಕರರು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಪುತ್ತೂರು ಕೆ.ಎಸ್.ಆರ್.ಟಿ.ಸಿ. ಘಟಕ ಸಿಬ್ಬಂದಿ, ಬಿಎಂಎಸ್ ಸಂಘಟನೆ ನೇತೃತ್ವದಲ್ಲಿ ಈ ಪ್ರತಿಭಟನೆ ಆರಂಭಿಸಿದ್ದು, ಪುತ್ತೂರಿನ 'ಅಮರ್ ಜವಾನ್' ಜ್ಯೋತಿ ಬಳಿ ಈ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅಕ್ಟೋಬರ್ ನಲ್ಲಿ ಅರ್ಧ ಸಂಬಳ ನೀಡಿದ್ದು, ಬಳಿಕ ಸಂಬಳವನ್ನೇ ನೀಡದೆ ಕೇಂದ್ರ ಕಚೇರಿಯ ಅಧಿಕಾರಿಗಳು ನೌಕರರ ವಿರುದ್ಧ ದೌರ್ಜನ್ಯ ಎಸಗುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೇರಿದಂತೆ ಕೆ.ಎಸ್.ಆರ್.ಟಿ.ಸಿ. ಉನ್ನತ ಅಧಿಕಾರಿಗಳಿಗೂ ಮನವಿ ಮಾಡಲಾಗಿದೆ.

ಉಸ್ತುವಾರಿ ಸಚಿವರು ಮನವಿಗೆ ಸ್ಪಂದಿಸಿ ತಕ್ಷಣವೇ ಸಂಬಳ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇಂದಿನಿಂದ ಅ. 25ರ ತನಕ ಧರಣಿ ಸತ್ಯಾಗ್ರಹ ಮುಂದುವರಿಸಲಾಗುವುದು. ಸರಕಾರ ಈ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬರದೇ ಹೋದಲ್ಲಿ 25 ರ ಬಳಿಕ ಆಮರಣಾಂತ ಉಪವಾಸ ಧರಣಿ ಆರಂಭಿಸಲಾಗುವುದು ಎಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಿಎಂಎಸ್ ಘಟಕದ ಅಧ್ಯಕ್ಷ ಗಿರೀಶ್ ಮಳಿ ಎಚ್ಚರಿಸಿದ್ದಾರೆ. ಅಲ್ಲದೆ, ಸಂಬಳ ನೀಡದೆ ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ವೈಯಕ್ತಿಕ ಕೇಸು ದಾಖಲಿಸಲಾಗುವುದು ಎಂದರು.

Edited By : Shivu K
Kshetra Samachara

Kshetra Samachara

21/10/2021 11:07 am

Cinque Terre

18.18 K

Cinque Terre

4

ಸಂಬಂಧಿತ ಸುದ್ದಿ