ಮಣಿಪಾಲ: ಸಾಂವಿಧಾನಿಕವಾಗಿ ತೆಗೆದುಕೊಂಡಿರುವ ಪ್ರಮಾಣವಚನದ ವಿರುದ್ಧ ಸಿಎಂ ನೀಡಿರುವ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಉಡುಪಿಯ ಮಣಿಪಾಲದಲ್ಲಿಂದು ಪ್ರತಿಭಟನೆ ನಡೆಯಿತು.ಮಣಿಪಾಲದ ರಜತಾದ್ರಿ ಎದುರು ಪ್ರಗತಿಪರ ಸಂಘಟನೆಗಳು ಈ ಪ್ರತಿಭಟನೆ ಆಯೋಜಿಸಿದ್ದವು.
ಮಂಗಳೂರಿನಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಸಿಎಂ ಮಾತನಾಡುತ್ತಾ “ಕಾನೂನು ಪಾಲನೆ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ. ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು. ಮೊರಾಲಿಟಿ ಅನ್ನೋದು ಸಮಾಜದಲ್ಲಿ ಬೇಕಲ್ವಾ, ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕೋಕೆ ಆಗುತ್ತಾ? ಇವತ್ತು ನಾವು ನೈತಿಕತೆ ಇಲ್ಲದೆ ಬದುಕೋಕೆ ಆಗಲ್ಲ. ನಮ್ಮೆಲ್ಲರ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ನಿಂತಿರೋದು ನಮ್ಮ ನೈತಿಕತೆ ಮೇಲೆ. ಇದು ಇಲ್ಲದಾಗ ಆಕ್ಷನ್- ರಿಯಾಕ್ಷನ್ ಆಗುತ್ತದೆ. ಇದು ಸಹಜ ಎಂದು ಹೇಳಿದ್ದೀರಿ.ಈ ನಿಮ್ಮ ಹೇಳಿಕೆ ಒಬ್ಬ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ.ಅನೈತಿಕ ಪೊಲೀಸ್ ಗಿರಿ ಮತ್ತು ಮತೀಯ ಗೂಂಡಾಗಿರಿ ಯನ್ನು ಈ ನಿಮ್ಮ ಹೇಳಿಕೆ ಸಮರ್ಥಿಸುತ್ತದೆ.ನೀವು ತಕ್ಷಣ ಈ ಹೇಳಿಕೆ ಹಿಂಪಡೆದು ,ರಾಜ್ಯದಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಬೇಕು ಎಂದು ಮುಖಂಡರು ಆಗ್ರಹಿಸಿದರು.ಬಳಿಕ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು.
Kshetra Samachara
21/10/2021 01:23 pm