ಪುತ್ತೂರು: ದೇಶದಲ್ಲಿ ಬೆಲೆ ಏರಿಕೆಯ ಬಿಸಿಯನ್ನು ಜನ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾದ್ಯಂತ ನಳಿನ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ನಡೆಸಿದ ಕಾರ್ಯ ಮಾದರಿಯಾಗಿದೆ.
ಕೊರೊನಾ ಸಂಕಷ್ಟ ಕಾಲದಲ್ಲಿ ದೇಶದ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ ಎನ್ನುವ ನಂಬಿಕೆ ಜನರಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ವೆಂಟಿಲೇಟರ್, ಆಕ್ಸಿಜನ್ ಪ್ಲಾಂಟ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡುವ ಮೂಲಕ ಜನರ ಜೀವ ಉಳಿಸುವ ಕೆಲಸ ಮಾಡಿದ್ದಾರೆ. ದೇಶದ ಎಲ್ಲಾ ಜನರಿಗೂ ಉಚಿತವಾಗಿ ಲಸಿಕೆ ಸಿಗುವಂತೆ ಮಾಡಿದ್ದು, ವಿಶ್ವದ ಯಾವ ದೇಶವೂ ಮಾಡದ ಸಾಧನೆಯನ್ನು ಲಸಿಕೆ ವಿತರಣೆಯಲ್ಲಿ ದೇಶ ಮಾಡಿದೆ. ದೇಶದಲ್ಲಿ ಈಗಾಗಲೇ 100 ಕೋಟಿಗೂ ಅಧಿಕ ಲಸಿಕೆಯನ್ನು ನೀಡಲಾಗಿದೆ ಎಂದ ಅವರು ಈ ರೀತಿಯ ಕಾರ್ಯಗಳನ್ನು ದೇಶದ ಜನ ಮೆಚ್ಚಿಕೊಂಡಿದ್ದಾರೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವುದು ನಿಜವಾಗಿದ್ದು, ಈ ಬೆಲೆ ಏರಿಕೆ ವಿಶ್ವದ ಎಲ್ಲಾ ರಾಷ್ಟ್ರಗಳಿಗೂ ತಟ್ಟಿದೆ. ಈ ಬೆಲೆ ಏರಿಕೆಯ ಪರಿಣಾಮ ದೇಶದ ಮೇಲೂ ಆಗಿದೆ ಎಂದರು. ಈ ಎಲ್ಲಾ ಕಾರಣಕ್ಕಾಗಿ ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮಾಡಿದ ಸೇವೆಗೆ ಜನ ಬೆಲೆ ಏರಿಕೆಯನ್ನು ಒಪ್ಪಿಕೊಂಡಿದ್ದಾರೆ ಎಂದರು. ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಬಿಜೆಪಿ ಪಕ್ಷ ಈ ಚುನಾವಣೆಯನ್ನು
ಮೂರು ಹಂತದಲ್ಲಿ ಚುನಾವಣೆ ಎದುರಿಸಲು ನಿರ್ಧರಿಸಲಾಗಿದೆ.
ಸಾರ್ವಜನಿಕ ಸಭೆ, ಬೂತ್ ಮಟ್ಟದ ಸಭೆ ಹಾಗೂ ಮತದಾರನ ಮನೆ ಭೇಟಿ ಮೂಲಕ ಪ್ರಚಾರ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಯಲಿದೆ. ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಜನ ಬಿಜೆಪಿ ಪರ ಒಲವಿದ್ದು, ಹಾನಗಲ್ ಕ್ಷೇತ್ರದಲ್ಲಿ ಸಿ.ಎಮ್. ಉದಾಸಿ ಉತ್ತಮ ಕಾರ್ಯ ಮಾಡಿದ್ದಾರೆ. ಈ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ರ ಜನಪರ ಕಾರ್ಯ, ಮುಖ್ಯಮಂತ್ರಿ ಬೊಮ್ಮಾಯಿಯವರ ಆಡಳಿತವನ್ನು ಜನ ಮೆಚ್ಚಿದ್ದಾರೆ. ಕೇಂದ್ರ ಸರಕಾರದ ಜನಪರ ಕಾರ್ಯಕ್ರಮಗಳೂ ಬಿಜೆಪಿ ಗೆಲುವಿಗೆ ಕಾರಣವಾಗಿದೆ ಎಂದರು.
Kshetra Samachara
22/10/2021 03:38 pm