ಉಡುಪಿ: ಅಸಂವಿಧಾನಿಕವಾಗಿ ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳಿಗೆ ಒಪ್ಪಲು ಸಾಧ್ಯವಿಲ್ಲ. ಶೀಘ್ರ ಈ ನೀತಿ ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಬಿಗ್ ಬಝಾರ್ ಬಳಿಯಿಂದ ಕ್ಲಾಕ್ ಟವರ್ ವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು.
ಮೂರು ದಶಕಗಳ ನಂತರ ಜಾರಿಗೊಳಿಸಲು ಉದ್ದೇಶಿಸಿರುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಹೊಸ ಬದಲಾವಣೆ ನಿರೀಕ್ಷೆಯಲ್ಲಿದ್ದರು, ಆದರೆ ನಿರೀಕ್ಷೆಗೆ ತದ್ವಿರುದ್ದವಾಗಿ ಜನರನ್ನು ಕನಸಿನ ಲೋಕದಲ್ಲಿ ತೇಲಾಡಿಸುವ ಅಸಮರ್ಪಕ ಹಾಗೂ ಅವೈಜ್ಞಾನಿಕವಾದ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕ.
ಕ್ಯಾಬಿನೆಟ್ ಸಭೆ ಕರೆದು ಲೋಕಸಭೆಯಲ್ಲಾಗಲಿ, ವಿಧಾನಸಭೆಯಲ್ಲಾಗಲಿ ಚರ್ಚೆಗೆ ಒಳಪಡಿಸದೆ ಹಿಂಬದಿ ಬಾಗಿಲಿನ ಮೂಲಕ ಜಾರಿಗೊಳಿಸಿರುವುದರ ಹಿಂದಿರುವ ದುರುದ್ದೇಶವನ್ನು ಕ್ಯಾಂಪಸ್ ಫ್ರಂಟ್ ಅರಿತಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಚರ್ಚೆ ನಡೆಸಿ ಈ ನೀತಿ ಹಿಂಪಡೆಯಬೇಕೆಂದು ಕ್ಯಾಂಪಸ್ ಫ್ರಂಟ್ ಆಗ್ರಹಿಸಿತು. ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಲ್ತಾಫ್ ಹೊಸಪೇಟೆ, ನವಾಝ್ ಶೇಕ್, ಜಿಲ್ಲಾ ಅಧ್ಯಕ್ಷ ಅಸೀಲ್ ಅಕ್ರಮ್, ಕಾರ್ಯದರ್ಶಿ ಸಾದಿಕ್, ಕುಂದಾಪುರ ಅಧ್ಯಕ್ಷ ಮುಜಾಹಿದ್ ಹಾಗೂ ಕಾರ್ಯದರ್ಶಿ ಸಿಯಾನ್, ಜಿಲ್ಲಾ ಮುಖಂಡ ಝಮಝಮ್ ಉಪಸ್ಥಿತರಿದ್ದರು.
Kshetra Samachara
28/10/2021 07:25 pm