ಪಣಂಬೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಣಂಬೂರಿನಲ್ಲಿರುವ ಎಂಸಿಎಫ್ ರಸಗೊಬ್ಬರ ಕಾರ್ಖಾನೆಯಲ್ಲಿ 400 ಕೋಟಿ ರೂ. ವೆಚ್ವದಲ್ಲಿ ನೂತನವಾಗಿ ನಿರ್ಮಿಸಲಾಗುವ ಅಮೋನಿಯಂ ಸ್ಥಾವರಕ್ಕೆ ಕೇಂದ್ರ ರಸಗೊಬ್ಬರ ಖಾತೆಯ ಸಚಿವರಾದ ಭಗವಂತ ಖೂಬಾ ಶಂಕುಸ್ಥಾಪನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವ ಅಂಗಾರ, ಶಾಸಕರಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಪ್ರತಾಪಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಸ್ಥಳೀಯ ಕಾರ್ಪೊರೇಟರ್ ಸುಮಿತ್ರಾ ಕರಿಯ ಹಾಗೂ ಎಂಸಿಎಫ್ ಸಂಸ್ಥೆಯ ಪ್ರಭಾಕರ್ ರಾವ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
29/10/2021 07:43 pm