ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಉಪಚುನಾವಣೆ ಕಾಂಗ್ರೆಸ್ ಜಯಭೇರಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವಿಜಯೋತ್ಸವ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹ

ಮುಲ್ಕಿ: ರಾಜ್ಯದಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶ್ರೀನಿವಾಸ ಮಾನೆ ಜಯಭೇರಿ ಸಾಧಿಸಿದ್ದರ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸೂಚನೆ ಮೇರೆಗೆ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಳೆಯಂಗಡಿ ಜಂಕ್ಷನ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಯವರ ಪ್ರತಿಷ್ಠಿತ ಕ್ಷೇತ್ರ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ.

ಮುಖ್ಯಮಂತ್ರಿ ಸಹಿತ ರಾಜ್ಯ ಸಚಿವ ಸಂಪುಟದ ಅನೇಕ ಸಚಿವರು ರಾಜ್ಯದ ಆಡಳಿತವನ್ನು ನಿರ್ಲಕ್ಷಿಸಿ ಪ್ರತಿಷ್ಠೆಯನ್ನು ಪಣವಾಗಿಟ್ಟು ಕ್ಷೇತ್ರದಲ್ಲಿ ಹಣದ ಹೊಳೆಯನ್ನು ಹರಿಸಿದರೂ ಚುನಾವಣೆ ಗೆಲ್ಲಲು ಸಾಧ್ಯವಾಗಿಲ್ಲ.

ತವರು ಕ್ಷೇತ್ರದ ಸೋಲಿನ ಹಿನ್ನೆಲೆಯಲ್ಲಿ ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಪ್ರವೀಣ್ ಬೊಳ್ಳೂರು, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಮುಲ್ಕಿ ನಪಂ ಸದಸ್ಯರಾದ ಪುತ್ತು ಬಾವ ಯೋಗೀಶ್ ಕೋಟ್ಯಾನ್, ಕಾಂಗ್ರೆಸ್ ನಾಯಕರಾದ ಪದ್ಮಾವತಿ ಶೆಟ್ಟಿ, ಧನರಾಜ ಸಸಿಹಿತ್ಲು, ಅಬ್ದುಲ್ ಅಜೀಜ್, ಅಬ್ದುಲ್ ಖಾದರ್, ಚಂದ್ರಶೇಖರ್, ಕಿರಣ್ ಪಕ್ಷಿಕೆರೆ, ಧರ್ಮಾನಂದ ಶೆಟ್ಟಿಗಾರ್, ರಿತೇಶ್ ಸಾಲ್ಯಾನ್, ಪೂರ್ಣಿಮ ಮಧು, ಹಮೀದ್ ಸಾಗ್, ವಾಮನ ಪೂಜಾರಿ, ಅಬ್ದುಲ್ ಖಾದರ್ ಅಂಗರಗುಡ್ಡೆ ಮತ್ತಿತರರು ಉಪಸ್ಥಿತರಿದ್ದು ವಿಜಯೋತ್ಸವ ಆಚರಿಸಿದರು.

Edited By : Nagesh Gaonkar
Kshetra Samachara

Kshetra Samachara

02/11/2021 07:28 pm

Cinque Terre

7.88 K

Cinque Terre

1

ಸಂಬಂಧಿತ ಸುದ್ದಿ