ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಅಂಬೇಡ್ಕರ್ ಕಾಲೊನಿಗೆ ಸಚಿವ ಕೋಟ ಭೇಟಿ; ವಸತಿ ಯೋಜನೆ ಮಾಹಿತಿ

ಕುಂದಾಪುರ: ಕುಂದಾಪುರ ಪುರಸಭೆ ವ್ಯಾಪ್ತಿಯ ಅಂಬೇಡ್ಕರ್ ಕಾಲೊನಿಗೆ ಇಂದು ಸಮಾಜ ಕಲ್ಯಾಣ ಇಲಾಖೆ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.

ಈ ವೇಳೆ ಮಾತನಾಡಿದ ಸಚಿವರು, ಇಲ್ಲಿನ ಪುರಸಭೆ ವ್ಯಾಪ್ತಿಯ ಅಂಬೇಡ್ಕರ್ ಕಾಲೊನಿಯ ಪರಿಶಿಷ್ಟ ಪಂಗಡ ಕುಟುಂಬಗಳ 13 ಮನೆಗಳು ಅಪೂರ್ಣಗೊಂಡಿದ್ದು, ಮೂರ್ನಾಲ್ಕು ಮನೆಗಳು ಪೂರ್ಣ ಪ್ರಮಾಣದಲ್ಲಿ ಆಗಿವೆ. ಪೂರ್ಣಗೊಂಡ ಮನೆ ನಿರ್ಮಾಣದ ಕೊನೆ ಕಂತು ಮಾತ್ರ ಬರಬೇಕಿದೆ. ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ, ವಸತಿ ಇಲಾಖೆಯೊಂದಿಗೆ ಮಾತನಾಡಿದ್ದು, 15 ದಿನಗಳಲ್ಲಿ ಖಾತೆಗೆ ಹಣ ವರ್ಗಾಯಿಸುವ ಕೆಲಸ ಮಾಡುತ್ತೇವೆ ಎಂದರು.

ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್, ಸದಸ್ಯ ಪ್ರಭಾಕರ, ನಾಮ ನಿರ್ದೇಶಿತ ಸದಸ್ಯ ರತ್ನಾಕರ್, ಪುರಸಭೆ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಪೌರ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ನಾಗರಾಜ್, ಬಿಜೆಪಿ ಮುಖಂಡ ಸದಾನಂದ ಉಪ್ಪಿನಕುದ್ರು, ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ರಾಘವೇಂದ್ರ ವರ್ಣೇಕರ್, ಬಿಸಿಎಂ ಇಲಾಖೆ ತಾಲೂಕು ಅಧಿಕಾರಿ ನರಸಿಂಹ ಪೂಜಾರಿ, ಪುರಸಭೆ ವಸತಿ ಯೋಜನೆ ಅಧಿಕಾರಿ ಗಣೇಶ್ ಜನ್ನಾಡಿ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

02/11/2021 07:41 pm

Cinque Terre

7.16 K

Cinque Terre

0

ಸಂಬಂಧಿತ ಸುದ್ದಿ