ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜನತೆಗೆ ದೀಪಾವಳಿಯ ಕೊಡುಗೆಯಾಗಿ ಪೆಟ್ರೋಲ್ ,ಡೀಸೆಲ್ ದರ ಇಳಿಕೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಜನತೆಗೆ ದೀಪಾವಳಿಯ ಕೊಡುಗೆಯಾಗಿ ಪೆಟ್ರೋಲ್ ,ಡೀಸೆಲ್ ದರ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೇಂದ್ರ ಕೃಷಿ ಸಚಿವೆ ಶೋಭಾ , ಪೆಟ್ರೋಲಿಯಮ್ ಉತ್ಪನ್ನಗಳು ನಮ್ಮ ದೇಶದಲ್ಲಿ ಉತ್ಪಾದನೆಯಾಗುವ ಪದಾರ್ಥವಲ್ಲ. ಬೆಲೆ ನಿಗದಿ ಕೇಂದ್ರ ಸರಕಾರದ ನಿಯಂತ್ರಣದಲ್ಲೂ ಇಲ್ಲ.

ಆದರೂ ಕೇಂದ್ರ ಸರಕಾರ ಡೀಸೆಲ್, ಪೆಟ್ರೋಲ್ ದರ ಕಡಿಮೆ ಮಾಡಿದೆ. ದೀಪಾವಳಿಯ ಸಂದರ್ಭದಲ್ಲಿ ಹೊಸ ಕೊಡುಗೆ ಘೋಷಣೆ ಮಾಡಿದೆ.

ದರ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂಬ ಅಪೇಕ್ಷೆ ಇದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುಪೇರಾದಾಗ ದರ ವ್ಯತ್ಯಾಸ ಆಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಈ ರೀತಿಯಾಗುತ್ತಿದೆ.ಕೇವಲ ನಮ್ಮ ಸರ್ಕಾರ ಮಾತ್ರವಲ್ಲ.

ಆಯಾ ಸರ್ಕಾರಗಳ ಅವಧಿಯಲ್ಲೂ ಹೀಗೆಯೇ ಆಗಿದೆ.ಈಗ ದರ ಕಡಿಮೆಯಾಗಿದೆ, ಅದು ಹಾಗೆಯೇ ಉಳಿಯಬೇಕು.

ನಮ್ಮ ಗ್ರಾಹಕರಿಗೆ ಒಳ್ಳೆಯದಾಗಬೇಕು.

ಪೆಟ್ರೋಲ್ ದರ ಆಧರಿಸಿ ಇತರ ಪದಾರ್ಥಗಳ ಬೆಲೆಯೂ ಏರಿಕೆಯಾಗುತ್ತದೆ. ದರ ಯಥಾಸ್ಥಿತಿ ಇದ್ದರೆ ಜನರಿಗೆ ಅನುಕೂಲವಾಗುತ್ತದೆ.

ಪ್ರಧಾನಿಯವರು ಒಳ್ಳೆಯ ಕೊಡುಗೆ ನೀಡಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Edited By : Manjunath H D
Kshetra Samachara

Kshetra Samachara

04/11/2021 03:00 pm

Cinque Terre

4.49 K

Cinque Terre

3

ಸಂಬಂಧಿತ ಸುದ್ದಿ