ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ವಿಧಾನ ಪರಿಷತ್ ಚುನಾವಣಾ ಕಣ ರಂಗೇರುತ್ತಿದೆ. ಪ್ರಮುಖ ಪಕ್ಷಗಳಿಗೆ ಟಕ್ಕರ್ ನೀಡಲು ಸಹಕಾರಿ ಧುರೀಣ ಕಣಕ್ಕೆ ಧುಮುಕುವ ಸುಳಿವು ನೀಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಎಂ ಎನ್ ರಾಜೇಂದ್ರ ಕುಮಾರ್ ಉತ್ಸುಕರಾಗಿದ್ದಾರೆ.ರಾಜೇಂದ್ರ ಕುಮಾರ್,ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷರಾಗಿದ್ದಾರೆ. ಸಹಕಾರಿ ಕ್ಷೇತ್ರಕ್ಕೆ ಪರಿಷತ್ ಸ್ಥಾನ ಮೀಸಲಿಡಬೇಕು ಎಂದು ಹೇಳಿರುವ ರಾಜೇಂದ್ರ ಕುಮಾರ್ ,ನಿನ್ನೆಯಿಂದ ಎಲ್ಲರೂ ನನಗೆ ಚುನಾವಣೆಗೆ ಸ್ಪರ್ಧಿಸಲು ಒತ್ತಡ ಹಾಕುತ್ತಿದ್ದಾರೆ.
ಎರಡು-ಮೂರು ದಿನಗಳಲ್ಲಿ ಚುನಾವಣೆಗೆ ನಿಲ್ಲುವ ಬಗ್ಗೆ ತೀರ್ಮಾನ ಮಾಡುತ್ತೇನೆ. ಯಾವುದೇ ರಾಜಕೀಯ ಪಕ್ಷದಿಂದ ಸ್ಪರ್ಧಿಸುವುದಿಲ್ಲ.ಸ್ಪರ್ಧಿಸುವುದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಸೋಲು-ಗೆಲುವು ಮುಖ್ಯವಲ್ಲ, ಯಾವುದೇ ಕಾರಣಕ್ಕೂ ಪಕ್ಷದಿಂದ ಸ್ಪರ್ಧಿಸುವುದಿಲ್ಲ. ನವೋದಯ ಸದಸ್ಯರು, ಪಂಚಾಯತ್ ಸದಸ್ಯರು, ಸಹಕಾರಗಳಿಂದ ನನಗೆ ಒತ್ತಡ ಇದೆ.
ಶೇಕಡ 50ರಷ್ಟು ಸಹಕಾರಿಗಳೇ ಪಂಚಾಯತ್ ಸದಸ್ಯರಾಗಿದ್ದಾರೆ. ಸ್ವಸಹಾಯ ಸಂಘಗಳ ಮಹಿಳೆಯರು ಶೇಕಡಾ 30ರಷ್ಟು ಸದಸ್ಯರಾಗಿದ್ದಾರೆ. ನಂಬರ್ 17ರಂದು ನನ್ನ ತೀರ್ಮಾನ ಪ್ರಕಟಿಸುತ್ತೇನೆ.ಸಾಧ್ಯವಾದರೆ ಅದೇ ದಿನ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
Kshetra Samachara
10/11/2021 06:12 pm