ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಪ್ರಮುಖರ ಪುತ್ರರ ಹೆಸರು; ಸಿದ್ದರಾಮಯ್ಯ ರಾಜೀನಾಮೆ ನೀಡುವರೇ"

ಮಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ರಾಜ್ಯದ ಸಿಎಂ ರಾಜೀನಾಮೆ‌ ನೀಡಬೇಕೆಂದು ಒತ್ತಾಯಿಸಿದ್ದ ಸಿದ್ದರಾಮಯ್ಯನವರು ಇದೀಗ ಅವರ ಪಕ್ಷದ ಪ್ರಭಾವಿಗಳ ಪುತ್ರರ ಹೆಸರು ಕೇಳಿ ಬರುತ್ತಿದೆ. ಹಾಗಾದರೆ ಸಿದ್ದರಾಮಯ್ಯನವರು ತಮ್ಮ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ? ಹಾಗೆಯೇ ಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ನೀಡಲು ತಿಳಿಸುತ್ತಾರೆಯೇ? ಎಂದು ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಪ್ರಶ್ನಿಸಿದರು.

ನಗರದ ಕೊಡಿಯಾ ಲ್ ಬೈಲ್ ನಲ್ಲಿರುವ ಅಟಲ್ ಕೇಂದ್ರದಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿದೆ. ಇದೀಗ ಅವರು ನಮ್ಮಲ್ಲಿ ಹಗರಣಕ್ಕೆ ಸಂಬಂಧಿಸಿ ಮಾಹಿತಿ ಇದೆ ಎಂದರೂ ಯಾಕೆ ಅದನ್ನು ಬಿಚ್ಚಿಡುತ್ತಿಲ್ಲ. ಹಗರಣದ ಪ್ರಮುಖ ಆರೋಪಿ‌ ಶ್ರೀಕಿ ಬಂಧನದ ಬಳಿಕ ಆತ ಕಾಂಗ್ರೆಸ್ ಪ್ರಭಾವಿ ನಾಯಕರ ಪುತ್ರರಾದ ಮೊಹಮ್ಮದ್ ನಲಪಾಡ್, ದರ್ಶನ್ ಲಮಾಣಿ ಹೆಸರು ಹೇಳಿದ್ದಾನೆ. ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಡೀಲಿಂಗ್ಸ್ ಬಗ್ಗೆ ಉಲ್ಲೇಖಿಸಿದ್ದಾನೆ. ಆದರೆ, ಸಿದ್ದರಾಮಯ್ಯ ಸಮಾಜದ ದಾರಿ ತಪ್ಪಿಸುತ್ತಿದ್ದಾರೆ. ಅವರು ನಿರಂತರವಾಗಿ ತಾವು ಪ್ರಚಾರದಲ್ಲಿರಬೇಕೆಂಬ ಉದ್ದೇಶದಿಂದ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಇದು ಮಾಜಿ ಸಿಎಂಗೆ ಶೋಭೆ ತರುವುದಿಲ್ಲ.

ಬಿಟ್ ಕಾಯಿನ್ ಪ್ರಕರಣ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಏನು ತಿಳಿದಿದೆಯೋ ಪ್ರಕಟ ಪಡಿಸಲಿ. ಅದೇ ರೀತಿ ಅವರದೇ ಪಕ್ಷದ ಪ್ರಮುಖರ ಪುತ್ರರ ಹೆಸರು ಕೇಳಿ ಬಂದಿರುವುದರಿಂದ ಜವಾಬ್ದಾರಿ ಉಳಿಸಿಕೊಳ್ಳಲು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಯಾವಾಗ ನೀಡುತ್ತೀರಿ. ರಾಜ್ಯದ ಮಾಜಿ ಸಿಎಂ ಆಗಿ, ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿಯಿಂದ ವರ್ತಿಸಲು ಯಾವಾಗ ಆರಂಭಿಸುತ್ತೀರಿ ಎಂದು ಪ್ರಶ್ನಿಸಿದರು.

Edited By : Nagesh Gaonkar
Kshetra Samachara

Kshetra Samachara

11/11/2021 09:50 pm

Cinque Terre

6.21 K

Cinque Terre

2

ಸಂಬಂಧಿತ ಸುದ್ದಿ