ಉಡುಪಿ: ವಿಧಾನಪರಿಷತ್ ಮತ್ತು ಮುಂದೆ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಇವತ್ತು ಪಕ್ಷದ ಮುಖಂಡರ ಮಹತ್ವದ ಸಭೆ ನಡೆಯಿತು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಬಲವರ್ಧನೆ ಮತ್ತು ಮುಂದೆ ನಡೆಯಲಿರುವ ಚುನಾವಣೆ ತಯಾರಿ ಕುರಿತು ಚರ್ಚೆ ನಡೆಯಿತು.
ಸಭೆಯಲ್ಲಿ ವಿನಯ್ ಕುಮಾರ್ ಸೊರಕೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಬಗ್ಗೆ ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ಸಲಹೆ ನೀಡಿದರು ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಮಾಜಿ ಶಾಸಕ ಗೋಪಾಲ್ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ವೇರೋನಿಕಾ ಕರ್ನಾಲಿಯೊ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
12/11/2021 03:21 pm