ಪುತ್ತೂರು: ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಸಾಹಿತ್ಯ ವೇದಿಕೆಯಲ್ಲಿ ತೊಡ ಗಿಸಿಕೊಳ್ಳುವ ಮೂಲಕ ಯುವಜನತೆಯಲ್ಲಿ ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಎಂ.ಆರ್. ವಾಸುದೇವ ರಾವ್ ಭರವಸೆ ನೀಡಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನಡೆಯುವ ಕನ್ನಡ ಸಾಹಿತ್ಯ ಪರಿಷತ್ ನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ತಾನು ಸ್ಪರ್ಧಿಸುತ್ತಿದ್ದು, ಕನ್ನಡದ ಉಳಿವಿಗಾಗಿ ಎಲ್ಲ ಪ್ರಯತ್ನ ನಡೆಸುವುದಾಗಿ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕರಾಗಿದ್ದ ಸಂದರ್ಭ ವಿಮಾನ ನಿಲ್ದಾಣದಲ್ಲಿ ಕನ್ನಡ ನಾಮಫಲಕ, ಕನ್ನಡದಲ್ಲಿ ಅನೌನ್ಸ್ ಮೆಂಟ್ ಸಹಿತ ಕನ್ನಡ ಪರವಾದ ಕ್ರಮ ಕೈಗೊಂಡಿರುವ ಜೊತೆಗೆ ಕನ್ನಡ ಸಾಹಿತ್ಯದಲ್ಲೂ ತೊಡಗಿಸಿಕೊಂಡಿರುವ ತನಗೆ ಈ ಬಾರಿ ಅವಕಾಶ ನೀಡಬೇಕೆಂದು ಮನವಿ ಮಾಡಿದರು.
ಸರಕಾರಿ ಶಾಲೆಗಳನ್ನು ಉಳಿಸುವ, ಮಂಗಳೂರಿನಲ್ಲಿ ಕನ್ನಡ ಭವನ ನಿರ್ಮಾಣ, ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಕನ್ನಡ ಪರಿಷತ್ ಗೆ ಸದಸ್ಯರನ್ನಾಗಿಸುವ ಕಾರ್ಯ ಮಾಡುವುದಾಗಿ ತಿಳಿಸಿದರು.
Kshetra Samachara
16/11/2021 12:33 pm