ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯಲ್ಲಿ ಬಿಜೆಪಿ ಜನ ಸ್ವರಾಜ್ ಸಮಾವೇಶದ ಪೂರ್ವಭಾವಿ ಸಭೆ

ಉಡುಪಿ: ರಾಜ್ಯ ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ನ.19ರಂದು ಉಡುಪಿ ಪುರಭವನದಲ್ಲಿ ನಡೆಯಲಿರುವ ಜನ ಸ್ವರಾಜ್ ಸಮಾವೇಶ ಹಾಗೂ ಚುನಾವಣಾ ಪೂರ್ವಸಿದ್ಧತೆಯ ಬಗ್ಗೆ ಸಮಾಲೋಚನಾ ಸಭೆಗಳನ್ನು ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆಸಲಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಎಲ್ಲ ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಸಮಾವೇಶದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ನ.17ರಂದು ಬಿಜೆಪಿ ಉಡುಪಿ ನಗರ ವತಿಯಿಂದ ನಗರ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜನ ಸ್ವರಾಜ್ ಸಮಾವೇಶದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇಂದು ಬಿಜೆಪಿ ಸ್ಥಳೀಯಾಡಳಿತ ಸಂಸ್ಥೆಗಳ ಸಹಿತ ಎಲ್ಲ ಸ್ತರಗಳಲ್ಲಿ ಜನಪರ ಆಡಳಿತ ನಡೆಸುತ್ತಿದೆ. ವಿಧಾನ ಪರಿಷತ್ ಚುನಾವಣೆಯ ಸಂಭಾವ್ಯ ಅಭ್ಯರ್ಥಿ ಕೋಟರವರು ಪಂಚಾಯತ್ ರಾಜ್ ಆಡಳಿತ ವ್ಯವಸ್ಥೆಯ ಬಗ್ಗೆ ಅಪಾರ ಅನುಭವವನ್ನು ಹೊಂದಿರುವ ಕಳಂಕ ರಹಿತ ಸಚ್ಚಾರಿತ್ರ್ಯವಂತ ಯಶಸ್ವೀ ಜನ ನಾಯಕ.

ಬಿಜೆಪಿ ಚುನಾವಣೆ ಗೆಲ್ಲುವುದು ನಿಶ್ಚಿತ. ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ವಿರೋಧಿ ಪಾಳಯದಿಂದ ಕುರುಡು ಕಾಂಚಾಣ ಬಹಳಷ್ಟು ಸದ್ದು ಮಾಡುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ ಬಿಜೆಪಿ ಮತದಾರರ ಯಾವುದೇ ಮತ ಮಾರಾಟಕ್ಕಿಲ್ಲ. ಪಕ್ಷದ ಸ್ಥಳೀಯಾಡಳಿತ ಸಂಸ್ಥೆಯ ಪ್ರತಿನಿಧಿಗಳಾದ ಗ್ರಾಮ ಪಂಚಾಯತ್ ಸದಸ್ಯರು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸದಸ್ಯರು ಈ ಬಗ್ಗೆ ಅತ್ಯಂತ ಜಾಗರೂಕತೆ ವಹಿಸಿ ಕೇವಲ 1ನೇ ಪ್ರಾಶಸ್ತ್ಯದ ಮತವನ್ನು ಮಾತ್ರ ಚಲಾಯಿಸುವ ಮೂಲಕ ಬಿಜೆಪಿಯ ಸಂಭಾವ್ಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸುವ ಮೂಲಕ ಬಿಜೆಪಿಯ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಎಂದೆಂದಿಗೂ ಪಕ್ಷ ನಿಷ್ಠೆಗೆ ಬದ್ಧರು ಎಂಬ ಸಂದೇಶವನ್ನು ಸಮಾಜಕ್ಕೆ ನೀಡಬೇಕಾಗಿದೆ ಎಂದು ಕುಯಿಲಾಡಿ ಹೇಳಿದರು.

Edited By : PublicNext Desk
Kshetra Samachara

Kshetra Samachara

17/11/2021 09:20 pm

Cinque Terre

2.8 K

Cinque Terre

0

ಸಂಬಂಧಿತ ಸುದ್ದಿ