ಉಡುಪಿ: ವಿಧಾನಪರಿಷತ್ ಚುನಾವಣೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಎರಡು ಸ್ಥಾನಗಳಿಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ನಡೆದಿದೆ. ಈ ಮಧ್ಯೆ ಬಿಜೆಪಿ ಒಂದು ಸ್ಥಾನವನ್ನು ಗೆಲ್ಲುವಷ್ಟು ಮತಗಳನ್ನು ಹೊಂದಿವೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಒಂದು ಸ್ಥಾನವನ್ನು ಗೆಲ್ಲಲು ಕೆಲವು ಮತಗಳ ಕೊರತೆ ಇವೆ. ಈ ಹಿನ್ನೆಲೆಯಲ್ಲಿ ಪರಿಷತ್ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.
ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಜಿಲ್ಲಾ ಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಇವತ್ತು ಸಂಜೆ ಅಥವಾ ನಾಳೆ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಹೈಕಮಾಂಡ್ ಘೋಷಣೆ ಮಾಡಲಿದೆ. ಬಿಜೆಪಿಗೆ ಒಂದು ಸ್ಥಾನ ಗೆಲ್ಲುವಷ್ಟು ಮತಗಳಿವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಕೆಲವು ಮತಗಳ ಕೊರತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಸಹಕಾರಿ ಧುರೀಣ ರಾಜೇಂದ್ರ ಕುಮಾರ್ ಅವರು ಕೂಡ ಪಕ್ಷದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ರಾಜೇಂದ್ರಕುಮಾರ್ ಹಿರಿಯ ಸಹಕಾರಿಯಾಗಿರುವುದರಿಂದ ಕೊರತೆ ಇರುವ ಮತಗಳನ್ನು ಹೊಂದಿಸಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಪಕ್ಷ ಅವರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಗೆಲುವು ಸುಲಭವಾಗಲಿದೆ ಎಂದು ಹೇಳಿದ್ದಾರೆ.
Kshetra Samachara
18/11/2021 04:56 pm