ಮಂಗಳೂರು: ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆಯನ್ನು ವಾಪಸ್ ತೆಗೆದುಕೊಂಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಬಿ.ರಮನಾಥ ರೈ, ಇದು ರೈತರ ಹೋರಾಟಕ್ಕೆ ಸಿಕ್ಕ ಜಯ. ಹೋರಾಟ, ಪ್ರತಿಭಟನೆ ಮಾಡಿದ್ರೆ ಯಶಸ್ಸು ಸಿಗುತ್ತದೆ ಎಂಬುದಕ್ಕೆ ಇದುವೇ ಉದಾಹರಣೆ. ಕೆಲ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲಾಯ್ತು. ಹೆಚ್ಚು ಸ್ಥಾನಗಳನ್ನು ವಿರೋಧ ಪಕ್ಷದವ್ರು ಗೆದ್ರು. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆದ್ದಿತು. ಬಿಜೆಪಿ ಸೋತಿದ್ದರಿಂದ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಯ್ತು. ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿದ್ದರಿಂದ ಇವತ್ತು ರೈತ ವಿರೋಧಿ ಕಾಯ್ದೆಯನ್ನು ವಾಪಸ್ ತೆಗೆಯಲಾಯಿತು ಎಂದು ಸಂತಸ ವ್ಯಕ್ತಪಡಿಸಿದರು.
Kshetra Samachara
19/11/2021 01:02 pm