ಮಂಗಳೂರು: ಕೊನೆಗೂ ಕಾಂಗ್ರೆಸ್ ವಿಧಾನ ಪರಿಷತ್ ಚುನಾವಣೆಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ದ್ವಿಸದಸ್ಯ ಕ್ಷೇತ್ರದ ಸ್ಪರ್ಧಾಕಣಕ್ಕೆ ಅಭ್ಯರ್ಥಿಯನ್ನು ಇಂದು ಘೋಷಿಸಿದೆ. ಬಿಜೆಪಿ ತಮ್ಮ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರೆಂದು ಘೋಷಿಸಿ ಅವರ ನಾಮಪತ್ರ ಸಲ್ಲಿಕೆಯಾದರೂ, ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಯನ್ನೇ ಘೋಷಣೆ ಮಾಡಿಲ್ಲ.
ಇಂದು ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಭಂಡಾರಿಯವರಿಗೆ ಟಿಕೆಟ್ ನೀಡಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಪ್ರತಾಪ್ ಚಂದ್ರ ಶೆಟ್ಟಿಯವರು ಈ ಬಾರಿ ಸ್ಪರ್ಧಿಸಲು ನಿರಾಕರಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ದ್ವಿಸದಸ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಹಲವು ಮಂದಿ ಆಕಾಂಕ್ಷಿಗಳಿದ್ದರು. ಕೊನೆಯ ಕ್ಷಣದಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಮಂಜುನಾಥ್ ಭಂಡಾರಿ ಪಾಲಾಗಿದೆ.
2014ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಂಜುನಾಥ್ ಭಂಡಾರಿ ಈ ಬಾರಿ ವಿಧಾನ ಪರಿಷತ್ ಸದಸ್ಯ ಸ್ಥಾನದ ಅಭ್ಯರ್ಥಿಯಾಗಿದ್ದರು. ಮಂಜುನಾಥ್ ಭಂಡಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿಲ್ಲದಿದ್ದರೂ ಕೇಂದ್ರದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಕೃಪಾಕಟಾಕ್ಷದಿಂದ ಅವರಿಗೆ ಪಕ್ಷ ಚುನಾವಣಾ ಕಣಕ್ಕಿಳಿಯಲು ಟಿಕೆಟ್ ನೀಡಿದೆ. ಜಯಲಕ್ಷ್ಮಿ ಅವರಿಗೆ ಒಲಿಯುತ್ತಾಳೆಯೇ ಎಂದು ಕಾದು ನೋಡಬೇಕಿದೆ.
Kshetra Samachara
22/11/2021 08:54 pm