ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿಧಾನ ಪರಿಷತ್ ಹಣಾಹಣಿ; ಕಾಂಗ್ರೆಸ್ ನಿಂದ ಮಂಜುನಾಥ ಭಂಡಾರಿ ನಾಮಪತ್ರ

ಮಂಗಳೂರು: ಮಂಗಳೂರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಭಂಡಾರಿ, ವಿದ್ಯಾರ್ಥಿ ಜೀವನದಿಂದಲೇ ನಾನು ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡವ. ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಹಿರಿಯ ನಾಯಕರು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

ಈ ಸಂದರ್ಭ ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಮೊಯ್ದೀನ್ ಬಾವಾ, ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

23/11/2021 04:40 pm

Cinque Terre

3.41 K

Cinque Terre

0

ಸಂಬಂಧಿತ ಸುದ್ದಿ