ಬಂಟ್ವಾಳ: ಕಾರಿಂಜ ಸಹಿತ ಹಿಂದು ಆರಾಧನಾಲಯಗಳ ಮುಂದೆ ಹಾಕಲಾಗಿರುವ ಭಗವಾಧ್ವಜಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗುವುದು ಬೇಡ ಎಂದು ಪೊಲೀಸ್ ಇಲಾಖೆಗೆ ಶಾಸಕ ರಾಜೇಶ್ ನಾಯ್ಕ್ ಸ್ಪಷ್ಟ ಸೂಚನೆ ನೀಡಿದ್ದಾರೆ.
ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಬಳಿ ಹಾಕಲಾಗಿದ್ದ ಭಗವಧ್ವಜ ತೆರವುಗೊಳಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪಕ್ಷದ ಪ್ರಮುಖರಿಂದ ವಿಷಯ ತಿಳಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಕ್ಷಣ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರಲ್ಲಿ ಮಾತುಕತೆ ನಡೆಸಿದರು. ಅಂತಹ ಯಾವುದೇ ಆದೇಶ ಇಲಾಖೆಯಿಂದ ನೀಡಲಾಗಿಲ್ಲ ಎಂದು ಪೋಲಿಸ್ ವರಿಷ್ಠಾಧಿಕಾರಿ ತಿಳಿಸಿದ್ದಾಗಿ ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.
Kshetra Samachara
25/11/2021 06:02 pm