ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸಮಾಜ ಘಾತುಕರಿಂದ ಶಾಂತಿಭಂಗದ ಬಹಿರಂಗ ಹೇಳಿಕೆ: ಯು.ಟಿ.ಖಾದರ್

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕರಾವಳಿಯಲ್ಲಿ ಅಹಿತಕರ ಘಟನೆಗಳು ಹೆಚ್ಚುತ್ತಿದೆ. ಪೊಲೀಸರ ಮೇಲೆಯೂ ರಾಜಕೀಯ ಒತ್ತಡ ಅಧಿಕವಾಗುತ್ತಿದೆ. ಇದರಿಂದಾಗಿ ಸಮಾಜಘಾತುಕ ಶಕ್ತಿಗಳು ಶಾಂತಿಭಂಗ ಉಂಟುಮಾಡುವ ಹೇಳಿಕೆಯನ್ನು ಬಹಿರಂಗವಾಗಿ ನೀಡುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.

ಮಂಗಳೂರಲ್ಲಿ ನಡೆದ

ಪತ್ರಿಕಾಗೋಷ್ಠಿಯಲ್ಲಿ ಯು.ಟಿ.ಖಾದರ್ ಮಾತನಾಡಿದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಗೃಹ ಸಚಿವರು ಜಿಲ್ಲಾಮಟ್ಟದಲ್ಲಿ ತುರ್ತು ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳಬೇಕು ಅಥವಾ ಈ ಬಗ್ಗೆ ವಿಧಾನಸಭೆಯಲ್ಲಿ ನನಗೆ ವಿಷಯ ಮಂಡಿಸಲು ಅವಕಾಶ ನೀಡಬೇಕು ಎಂದರು.

ಇನ್ನು ಕೇಂದ್ರ ಸರ್ಕಾರದ ಅಸಮರ್ಪಕ ನೀತಿಯಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕ ಒತ್ತಡದಿಂದ ಬಳಲುವಂತಾಗಿದೆ. ಎಂಬಿಬಿಎಸ್ ಪರೀಕ್ಷೆ ಮುಗಿಸಿದವರು ಕೌನ್ಸಿಲಿಂಗ್ ನಡೆಯದೇ ಇದ್ದ ಕಾರಣ ಕಾಯುತ್ತಿದ್ದಾರೆ. ನೀಟ್ ಪರೀಕ್ಷೆ ಬರೆದವರು ಸೀಟು ಹಂಚಿಕೆ ಆಗದೇ ಇರುವ ಕಾರಣ ಒತ್ತಡಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಮೌನ ವಹಿಸಿ ವಿದ್ಯಾರ್ಥಿಗಳಿಗೆ ದ್ರೋಹವೆಸಗಿದೆ ಎಂದರು.

ರಾಜ್ಯ ಸರ್ಕಾರಕ್ಕೆ ವೈದ್ಯಕೀಯ ಕ್ಷೇತ್ರದ ಬಗ್ಗೆ ಆಸಕ್ತಿ ಇದ್ದರೆ ರಾಜ್ಯದಲ್ಲಿ ಸಿಇಟಿ ಮಾತ್ರ ಜಾರಿ ಮಾಡುತ್ತೇವೆ ಎಂದು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಕೇಂದ್ರ ಸರಕಾರದ ತಪ್ಪು ನೀತಿಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮುಳುವಾಗಿದೆ ಎಂದು ಆರೋಪಿಸಿದರು.

Edited By : Nagesh Gaonkar
Kshetra Samachara

Kshetra Samachara

27/11/2021 06:32 pm

Cinque Terre

8.72 K

Cinque Terre

0

ಸಂಬಂಧಿತ ಸುದ್ದಿ