ಬ್ರಹ್ಮಾವರ: ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ ಖಾರ್ವಿ ಕೋಡಿಕನ್ಯಾಣ ಅವರು ನಾಲ್ಕು ಪದಕ ಪಡೆದು ಅಂತಾರಾಷ್ಟ್ರೀಯ ಈಜು ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.
100 ಮೀ. ಫ್ರೀ ಸ್ಟೈಲ್ ನಲ್ಲಿ ಚಿನ್ನದ ಪದಕ, 400 ಮೀ. ಫ್ರೀ ಸ್ಟೈಲ್ ಬೆಳ್ಳಿ ಪದಕ, 200 ಮೀ. ಫ್ರೀ ಸ್ಟೈಲ್ ಕಂಚಿನ ಪದಕ, 4x50 ಮಿಡ್ಲೆ ರಿಲೇಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ಗೋಪಾಲ ಖಾರ್ವಿ ಉಡುಪಿಯ ಅಜ್ಜರಕಾಡು ಈಜುಕೊಳದ ತರಬೇತುದಾರರಾಗಿದ್ದು, 2013ರಲ್ಲಿ ಕೈ ಕಾಲುಗಳನ್ನು ಸ್ವಯಂ ಕೋಳದಿಂದ ಬಂಧಿಸಿ, ಸಮುದ್ರದಲ್ಲಿ 3.71 ಕಿ.ಮೀ. ಈಜಿ ಗಿನ್ನೆಸ್ ದಾಖಲೆ ಮಾಡಿದ್ದರು! ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಸಂದೇಶ ಪ್ರಶಸ್ತಿ ಲಭಿಸಿದೆ. ಒಂಬತ್ತನೇ ತರಗತಿಯ ಕೊಂಕಣಿ ಪಠ್ಯಪುಸ್ತಕದಲ್ಲಿ ಗೋಪಾಲ್ ಖಾರ್ವಿ ಅವರ ಜೀವನ ಚರಿತ್ರೆಯನ್ನು ಪಠ್ಯವಾಗಿ ಅಳವಡಿಸಲಾಗಿದೆ.
ವರದಿ: ದಾಮೋದರ ಮೊಗವೀರ, ನಾಯಕವಾಡಿ
Kshetra Samachara
29/11/2021 05:20 pm