ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ಪಂಚಾಯತ್ ರಾಜ್ ಸಬಲೀಕರಣಕ್ಕೆ ಶ್ರೀನಿವಾಸ ಪೂಜಾರಿ ರಾಜ್ಯಕ್ಕೇ ಮಾದರಿ: ಶಾಸಕ ಕೆ.ರಘುಪತಿ ಭಟ್

ಉಡುಪಿ: ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯತ್ ನ ಸದಸ್ಯರಿಗೆ ಪ್ರಥಮ ಬಾರಿಗೆ ಗೌರವ ಧನವನ್ನು ಮಂಜೂರು ಮಾಡಿಸಿದ್ದು ನಮ್ಮ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ನವರ ಅವಧಿಯಲ್ಲಿ ರೂ.250 ಗೌರವ ಧನವನ್ನು ಮಂಜೂರು ಮಾಡಿಸಲು ಶ್ರಮ ಪಟ್ಟಿದ್ದಲ್ಲದೇ ಗೌರವ ಧನ ಹೆಚ್ಚಳಕ್ಕೆ ನಿರಂತರವಾಗಿ ಹೋರಾಟ ಮಾಡಿ ಈಗ ರೂ.1,000ಕ್ಕೆ ಗೌರವ ಧನವನ್ನು ಹೆಚ್ಚಿಸಿದ್ದು ಮಾತ್ರವಲ್ಲದೆ ವಿಧಾನ ಪರಿಷತ್ ನಲ್ಲಿ ಸಭಾ ನಾಯಕರಾಗಿ ರೂ.1,000 ಇದ್ದ ಗೌರವ ಧನವನ್ನು ರೂ.2,000ಕ್ಕೆ ಹೆಚ್ಚಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.

ಇತಿಹಾಸದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಸಬಲೀಕರಣಕ್ಕೆ ಗ್ರಾಮ ಪಂಚಾಯತ್ ಗಳು ಸರಕಾರದಂತೆ ಕೆಲಸವನ್ನು ಮಾಡಬೇಕೆನ್ನುವ ಕಲ್ಪನೆಯನ್ನು ನೀಡಿ ನಿರಂತರವಾಗಿ ಗ್ರಾಮ ಪಂಚಾಯತ್ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿಗೋಸ್ಕರ ದುಡಿದಿರುವ ಏಕೈಕ ಜನಪ್ರತಿನಿಧಿ ಕೋಟ ಶ್ರೀನಿವಾಸ ಪೂಜಾರಿಯವರು ಎಂದು ಹೇಳಲು ನನಗೆ ಹೆಮ್ಮೆಯೆನಿಸುತ್ತದೆ. ಆ ಹಿನ್ನೆಲೆಯಲ್ಲಿ ಎಲ್ಲರೂ ಒಟ್ಟಾಗಿ ಒಂದಾಗಿ ಪೂರ್ಣ ಬಹುಮತದಿಂದ ಅವರನ್ನು ಗೆಲ್ಲಿಸಬೇಕು ಎಂಬ ವಿನಂತಿಯನ್ನು ಮಾಡುತ್ತೇನೆ ಎಂದು ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ಹೇಳಿದರು.

ಅವರು ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಉಡುಪಿ ನಗರ ವ್ಯಾಪ್ತಿಯ ಗ್ರಾಮ ಪಂಚಾಯತ್ ಮತ್ತು ಉಡುಪಿ ನಗರಸಭಾ ಸದಸ್ಯರ ಚುನಾವಣಾ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ ಎಸ್. ಪೂಜಾರಿ, ಪ್ರಭಾಕರ ತಿಂಗಳಾಯ, ಗಾಯತ್ರಿ ಸುರೇಶ್, ಕೃಷ್ಣ ದೇವಾಡಿಗ, ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ನಗರಸಭಾ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/11/2021 05:48 pm

Cinque Terre

41.25 K

Cinque Terre

0

ಸಂಬಂಧಿತ ಸುದ್ದಿ