ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ಬಿಜೆಪಿ ಸರಕಾರ 40% ಕಮಿಷನ್ ಸರ್ಕಾರ: ಅಭಯಚಂದ್ರ

ಮುಲ್ಕಿ:ರಾಜ್ಯದಲ್ಲಿ ಆಡಳಿತ ನಡೆಸುವ ಬಿಜೆಪಿ ಸರಕಾರವು ಗುತ್ತಿಗೆದಾರರರಿಂದ 40% ಕಮಿಷನ್ ಪಡೆಯುತ್ತಿದ್ದು, ಈ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘ ಈಗಾಗಲೇ ರಾಷ್ಟ್ರಪತಿಯವರಿಗೆ ದೂರು ಸಲ್ಲಿಸಿದ್ದು ತನಿಖೆಯಾಗಬೇಕೆಂದು ಮಾಜಿ ಸಚಿವರಾದ ಕೆ ಅಭಯಚಂದ್ರ ಆಗ್ರಹಿಸಿದರು.

ಅವರು ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ಸೇವಾದಳದಂತಹ ಶಿಸ್ತುಬದ್ಧ ವಿಭಾಗವಿದ್ದು ಈ ಮೂಲಕ ಸ್ವಚ್ಚ ನಾಯಕರುಗಳನ್ನು ಹೊರತರಲು ಇದು ಅನುಕೂಲವಾಗುತ್ತದೆ ಎಂದರು.

ಅವರು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸೇವಾದಳದ ವಿಭಾಗದ ವತಿಯಿಂದ ಸೇವಾದಳ ಕಾರ್ಯಕರ್ತರಿಗೆ ಸಮವಸ್ತ್ರ ನೀಡಿದ ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಯಾಗಿ ಮಾತನಾಡಿದರು.

ಸಮವಸ್ತ್ರ ದಾನಿಯಾದ, ಬಿಲ್ಲವ ಮಹಾಮಂಡಲದ ಅಧ್ಯಕ್ಷರು ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿಯಾದ ರಾಜ್‍ಶೇಖರ್ ಕೋಟ್ಯಾನ್ ಮಾತನಾಡಿ ಅಭಯಚಂದ್ರ ರವರ ನಾಯಕತ್ವದಲ್ಲಿ ಮುಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಇನ್ನಷ್ಟು ಬಲಿಷ್ಠವಾಗಬೇಕಾದರೆ ಕಾರ್ಯಕರ್ತರು ತಮ್ಮ ಸ್ವಾರ್ಥಗಳನ್ನು ಬಿಟ್ಟು ಪಕ್ಷಕಟ್ಟುವ ಕೆಲಸಕ್ಕೆ ಒಂದಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷರಾದ ಮೋಹನ್ ಪಿ ಕೋಟ್ಯಾನ್ ವಹಿಸಿ ಮಾತನಾಡಿದರು.

ಕೆಪಿಸಿಸಿ ಕೋಆಡೀನೇಟರ್ ಎಚ್. ವಸಂತ್ ಬೆರ್ನಾರ್ಡ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಮುಲ್ಕಿ ನ ಪಂ ಮಾಜಿ ಅಧ್ಯಕ್ಷ ಶಶಿಕಾಂತ್ ಶೆಟ್ಟಿ, ಸದಸ್ಯರಾದ ವಿಮಲ ಪೂಜಾರಿ, ಯೋಗೀಶ್ ಕೋಟ್ಯಾನ್, ರಾಜ್ಯ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಪ್ರವೀಣ್ ಕುಮಾರ್ ಬೊಳ್ಳೂರು, ಮುಲ್ಕಿ ಬ್ಲಾಕ್ ಸೇವಾದಳದ ಮುಖ್ಯ ಸಂಘಟಕರಾದ ಭೀಮಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

01/12/2021 02:38 pm

Cinque Terre

2.56 K

Cinque Terre

0

ಸಂಬಂಧಿತ ಸುದ್ದಿ