ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಯಾರಿಗೂ ಬೇಡದ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿದ ಖುಷಿ ಇದೆ: ಸಚಿವ ಕೋಟ

ಗಂಗೊಳ್ಳಿ : ಯಾರಿಗೂ ಬೇಡವಾಗಿದ್ದ ಧಾರ್ಮಿಕ ದತ್ತಿ ಇಲಾಖೆಯನ್ನು ನನಗೆ ನೀಡಿದಾಗ ಯಾರೋ ಹೇಳಿದರು ,ಆ ಖಾತೆ ಅವರಿಗೆ ಯಾಗೆ ಕೊಟ್ಟಿದ್ದೀರಿ ಎಂದು.ಆದರೆ ನಾನು ಧಾರ್ಮಿಕ ದತ್ತಿ ಸಚಿವನಾಗಿ ಸಪ್ರಪದಿ ಯೋಜನೆ ಜಾರಿಗೆ ತಂದದ್ದು ನನಗೆ ಖುಷಿ ಕೊಟ್ಟಿದೆ ಎಂದು ಹಿಂದುಳಿದ ಮತ್ತು ಸಮಾಜ ಕಲ್ತಾಣ ಖಾತೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಅವರು ತ್ರಾಸಿಯ ಶ್ರೀ ಮಹಾಗಣಪತಿ ಸಭಾಭವನದಲ್ಲಿ ಬಿಜೆಪಿ ಬೈಂದೂರು ಮಂಡಲ ವತಿಯಿಂದ ಜರಗಿದ ಬಿಜೆಪಿ ಗಂಗೊಳ್ಳಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರ ಚುನಾವಣಾ ಪೂರ್ವಸಿದ್ಧತೆ ಸಭೆಯನ್ನುದ್ದೇಶಿಸಿ ಮಾತನಾಡಿದರು.

ನನ್ನ ಮಿತಿಯೊಳಗೆ 13ವರ್ಷಗಳಿಂದ ನಿರಂತರವಾಗಿ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಪರವಾಗಿ ಕೆಲಸಗಳನ್ನು ಮಾಡಿದ್ದೇನೆ ಎಂಬ ವಿಶ್ವಾಸವಿದೆ.

ಬಿಜೆಪಿಯಿಂದ ನಾನೊಬ್ಬನೇ ಅಭ್ಯರ್ಥಿಯಾಗಿದ್ದು, 1 ಅಂಕೆಯನ್ನು ಮಾತ್ರ ಬರೆಯುವ ಮೂಲಕ ಒಂದೇ ಮತವನ್ನು ಚಲಾಯಿಸಿಪಂಚಾಯತ್ ರಾಜ್ ಸಬಲೀಕರಣಕ್ಕಾಗಿ ನನ್ನನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ,ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ವಿಭಾಗೀಯ ಪ್ರಭಾರಿ ಉದಯಕುಮಾರ್ ಶೆಟ್ಟಿ, ಬೈಂದೂರು ಬಿಜೆಪಿ ಪ್ರಭಾರಿ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಬಿಜೆಪಿ ಮುಖಂಡ ಪ್ರವೀಣ ಶೆಟ್ಟಿ ಗುರ್ಮೆ, ಬಿಜೆಪಿ ಬೈಂದೂರು ಮಂಡಲ ಉಪಾಧ್ಯಕ್ಷ ವಿನೋದ ಭಂಡಾರಿ, ಗಂಗೊಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಮತ್ತಿತರರು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

01/12/2021 05:53 pm

Cinque Terre

6.26 K

Cinque Terre

0

ಸಂಬಂಧಿತ ಸುದ್ದಿ