ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮನ; ಜಿಲ್ಲಾಡಳಿತ ಸ್ವಾಗತ

ಮಂಗಳೂರು: ಕರಾವಳಿ‌ ಜಿಲ್ಲೆಯ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇದೀಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಡಿ.2 ರಿಂದ 5ರ ವರೆಗೆ ಮೂರು ದಿನಗಳ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವರು ಪ್ರವಾಸ ಕೈಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಬೆಂಗಳೂರಿನಿಂದ ವಿಮಾನದ ಮೂಲಕ ಆಗಮಿಸಿದ ಅವರು ಮಧ್ಯಾಹ್ನ 12.30ಕ್ಕೆ ಧರ್ಮಸ್ಥಳಕ್ಕೆ ತಲುಪಲಿದ್ದಾರೆ. 1 ಗಂಟೆಗೆ ಧರ್ಮಾಧಿಕಾರಿ ಡಾ‌.ಡಿ.ವೀರೇಂದ್ರ ಹೆಗ್ಗಡೆಯವರ ನಿವಾಸಕ್ಕೆ ಭೇಟಿ ನೀಡುವರು. 1.17ಕ್ಕೆ ದೇವಸ್ಥಾನಕ್ಕೆ ಭೇಟಿ, 1.42ಕ್ಕೆ ಅನ್ನಪೂರ್ಣ ಊಟದ ಹಾಲ್‌ಗೆ ಆಗಮಿಸುವರು. 3.18ಕ್ಕೆ ಮಂಜೂಷಾ ಮ್ಯೂಸಿಯಂಗೆ ಭೇಟಿ ನೀಡುವರು.

ಸಂಜೆ 4.03ಕ್ಕೆ ಕಾರ್ ಮ್ಯೂಸಿಯಂಗೆ ಆಗಮಿಸುವರು. ಸಂಜೆ 5.05ಕ್ಕೆ ಲಕ್ಷ ದೀಪೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ಸರ್ವಧರ್ಮ ಸಮ್ಮೇಳನ ಉದ್ಘಾಟಿಸುವರು. ಸಂಜೆ 6.15ಕ್ಕೆ ಧರ್ಮಸ್ಥಳದಿಂದ ಹೊರಟು 7.45ಕ್ಕೆ ಉಡುಪಿಯ ಸಕ್ಯೂರ್ಟ್ ಹೌಸ್‌ಗೆ ಆಗಮಿಸುವರು. ಅಲ್ಲಿ ವಾಸ್ತವ್ಯ ಹೂಡಿ ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

Edited By : Nagaraj Tulugeri
Kshetra Samachara

Kshetra Samachara

02/12/2021 12:58 pm

Cinque Terre

6.8 K

Cinque Terre

0

ಸಂಬಂಧಿತ ಸುದ್ದಿ