ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ತಿಳಿಸಲು ಕೋಟ ಮನವಿ

ಮುಲ್ಕಿ: ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡಬಿದ್ರೆ ಮಂಡಲದ ಕಿನ್ನಿಗೋಳಿ ಮತ್ತು ಮುಲ್ಕಿ ಮಹಾ ಶಕ್ತಿ ಕೇಂದ್ರದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ ಕಿನ್ನಿಗೋಳಿಯ ಯುಗಪುರುಷ ಸಭಾ ಭವನದಲ್ಲಿ ನಡೆಯಿತು.

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಕಳೆದ ಕೆಲವರ್ಷಗಳಿಂದ ಶಾಸಕ ಹಾಗೂ ಸಚಿವರಾದ ದಿನಗಳಲ್ಲಿ ಪಂಚಾಯತ್ ಅಭಿವೃದ್ಧಿಗೆ ಅನುದಾನ ದೊರಕಿಸಿಕೊಟ್ಟ ತೃಪ್ತಿ ಇದೆ. ಬಿಜೆಪಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿ ಗೆಲ್ಲಿಸಲು ಮನವಿ ಮಾಡಿದರು.

ಶಾಸಕರಾದ ಉಮಾನಾಥ್ ಕೋಟ್ಯಾನ್ ಮಾತನಾಡಿ ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ನಗರ ಹಾಗೂ ಗ್ರಾಮಗಳ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ದ ಕ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಕ್ಷೇತ್ರದ ಮಂಡಲ ಅಧ್ಯಕ್ಷರಾದ ಸುನಿಲ್ ಆಳ್ವ, ಮೂಡುಬಿದಿರೆ ಮಂಡಲ ಉಸ್ತುವಾರಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾ ಉಪಾಧ್ಯಕ್ಷ ಗಣೇಶ್ ಹೊಸಬೆಟ್ಟು ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/12/2021 03:41 pm

Cinque Terre

4.75 K

Cinque Terre

0

ಸಂಬಂಧಿತ ಸುದ್ದಿ