ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಸರಕಾರಿ ಆಸ್ಪತ್ರೆ ಅವ್ಯವಸ್ಥೆ, ಆರೋಗ್ಯಾಧಿಕಾರಿಯ ನಿರ್ಲಕ್ಷ್ಯ ತೆ; ಊರವರಿಂದ ಪ್ರತಿಭಟನೆ

ಬೈಂದೂರು: ಬೈಂದೂರಿನ ಸರಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ವಿರುದ್ಧ ಸ್ಥಳೀಯರೇ ಪ್ರತಿಭಟಿಸುವ ಮೂಲಕ‌ ಬಿಸಿ ಮುಟ್ಟಿಸಿದ್ದಾರೆ. ಇಲ್ಲಿನ‌ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಜೊತೆಗೆ ಇದ್ದ ಸಿಬ್ಬಂದಿ ನಡತೆಯೂ ಸರಿ ಇಲ್ಲ.

ಇಲ್ಲಿನ ಆರೋಗ್ಯಾಧಿಕಾರಿ ಮಹೇಂದ್ರ ಶೆಟ್ಟಿ ತಮ್ಮ ಕ್ಲಿನಿಕ್ ಮತ್ತು ಬೇರೆ ಆಸ್ಪತ್ರೆಯಲ್ಲೇ ಕಾಲ ಕಳೆಯುವ ಮೂಲಕ ಸರಕಾರಿ ಆಸ್ಪತ್ರೆಗೆ ಬರುವ ರೋಗಿಗಳನ್ನು ನಿರ್ಲಕ್ಷ್ಯ ಮಾಡುತ್ತಾರೆ ಎಂದು ಆರೋಪಿಸಿ ಇಡೀ ಊರ ಗ್ರಾಮಸ್ಥರು ಪ್ರತಿಭಟನೆ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಮುಖ್ಯ ವೈದ್ಯಾಧಿಕಾರಿ ಹಾಗೂ ಓರ್ವ ಸಿಬ್ಬಂದಿ ವರ್ಗಾವಣೆಗೆ ಹತ್ತು ದಿನದ ಗಡುವು ನೀಡಿದ ನಾಗರಿಕರು, ಜಿ.ಪಂ. ಸಿಇಒ, ಡಿಎಚ್ಒ ಹಾಗೂ ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.

ತಕ್ಷಣ ಇಲ್ಲಿನ ಅವ್ಯವಸ್ಥೆ ಸರಿಪಡಿಸಬೇಕು. ವೈದ್ಯಾಧಿಕಾರಿಯನ್ನು ವರ್ಗಾವಣೆ ಮಾಡಬೇಕು, ಸಿಬ್ಬಂದಿ ಕೊರತೆ ನೀಗಿಸಬೇಕು. ಇಲ್ಲದಿದ್ದಲ್ಲಿ‌, ಮುಂದಿನ‌ ದಿನಗಳಲ್ಲಿ ಇನ್ನಷ್ಟು ದೊಡ್ಡ ರೀತಿಯಲ್ಲಿ ಪ್ರತಿಭಟನೆ ಮಾಡಬೇಕಾದೀತು ಎಂದು ಊರವರು ಎಚ್ಚರಿಕೆ ನೀಡಿದ್ದಾರೆ.

Edited By : Shivu K
Kshetra Samachara

Kshetra Samachara

03/12/2021 06:53 pm

Cinque Terre

6.92 K

Cinque Terre

0

ಸಂಬಂಧಿತ ಸುದ್ದಿ