ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬಸವರಾಜ ಬೊಮ್ಮಾಯಿಯೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ:ಸಚಿವ ಕೋಟ

ಉಡುಪಿ: ಬಸವರಾಜ ಬೊಮ್ಮಾಯಿಯೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ.ಸಿಎಂ ಬದಲಾವಣೆ ವಿಚಾರದಲ್ಲಿ ಭ್ರಮಾಲೋಕದಲ್ಲಿರುವವರಿಗೆ ಉತ್ತರ ಕೊಡಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು ,ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಶಾಸಕಾಂಗ ಪಕ್ಷದ ಸಮ್ಮುಖದಲ್ಲಿ ಒಪ್ಪಿಗೆಯೊಂದಿಗೆ ಬೊಮ್ಮಾಯಿ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಸ್ವತಃ ಬಿಎಸ್ ವೈ ಅವರ ಸಮಕ್ಷಮದಲ್ಲೇ ಬೊಮ್ಮಾಯಿ ಸಿಎಂ ಆಗಿದ್ದಾರೆ.ಈವರೆಗೂ ಬಸವರಾಜ ಬೊಮ್ಮಾಯಿ ಪಾರದರ್ಶಕವಾಗಿ ಶ್ರದ್ದೆಯಿಂದ ಕೆಲಸ ಮಾಡಿದ್ದಾರೆ.

ಕೋವಿಡ್ ವಿಚಾರದಲ್ಲೂ ಮುಖ್ಯಮಂತ್ರಿಗಳು ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಕಾರ್ಯವೈಖರಿಗೆ ವಿಪಕ್ಚಗಳೇ ದಿಗ್ಭ್ರಮೆಗೊಂಡಿವೆ ಎಂದ ಕೋಟ, ವಿಪಕ್ಚಗಳಿಗೆ ಸಿಎಂ ಬೊಮ್ಮಾಯಿ ಕೊಟ್ಟಂತಹ ಮಾತುಗಳು ಐತಿಹಾಸಿಕ ದಾಖಲೆಯಾಗಿವೆ. ಅಭಿವೃದ್ಧಿ ವಿಚಾರದಲ್ಲಿ ಕಾಲಕಾಲಕ್ಕೆ ದೆಹಲಿಯಲ್ಲಿ ಹೈಕಮಾಂಡ್ ಭೇಟಿ ನಡೆಯುತ್ತಿರುತ್ತದೆ. ನೀರಾವರಿ ಸೇರಿದಂತೆ ಬೇರೆ ಬೇರೆ ಇಲಾಖೆಗೆ ಹೆಚ್ಚು ಅನುದಾನ ಪಡೆಯಲು ಹೇಕಮಾಂಡ್ ಭೇಟಿ ಸಹಜ ರಾಜಕೀಯ ಪ್ರಕ್ರಿಯೆ.ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

05/12/2021 05:20 pm

Cinque Terre

7.89 K

Cinque Terre

1

ಸಂಬಂಧಿತ ಸುದ್ದಿ