ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: "ರಮಾನಾಥ ರೈ, ಯು.ಟಿ.ಖಾದರ್ ಹೊರತುಪಡಿಸಿ ಎಲ್ಲ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ"

ಪುತ್ತೂರು: ಕಾಂಗ್ರೆಸ್ ಪಕ್ಷ ಕೆಲವೇ ದಿನಗಳಲ್ಲಿ ಎರಡು ಹೋಳಾಗಲಿದ್ದು, ಕಾಂಗ್ರೆಸ್ ನಿರ್ನಾಮವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

ಪುತ್ತೂರಿನ ಕಬಕದಲ್ಲಿ ನಡೆದ ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತ ಮಾಡಬೇಕೆಂಬ ಕನಸು ನನ್ನದೂ ಆಗಿದ್ದು, ಇದಕ್ಕಾಗಿ ಬಿಜೆಪಿ ಕಾರ್ಯಕರ್ತರು ಪ್ರಯತ್ನಿಸಬೇಕು. ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸುವ ಕಾರ್ಯ ಮಾಡಬೇಕಿದ್ದು, ಮಾಜಿ ಸಚಿವರಾದ ರಮಾನಾಥ ರೈ ಹಾಗೂ ಯು.ಟಿ.ಖಾದರ್ ಅವರನ್ನು ಬಿಟ್ಟು, ಉಳಿದ ಕಾರ್ಯಕರ್ತರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿ ಎಂದು ನಳಿನ್ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ವಿಟ್ಲದ ಕೆಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದು, ಈ ಸಂದರ್ಭ ಬಿಜೆಪಿಯ ಕೆಲ ಕಾರ್ಯಕರ್ತರು ಕಾಂಗ್ರೆಸ್ ಮುಖಂಡರ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿ ಕಪ್ಪು ಪಟ್ಟಿ ಪ್ರದರ್ಶಿಸಿದರು.

Edited By : Nagesh Gaonkar
Kshetra Samachara

Kshetra Samachara

06/12/2021 03:02 pm

Cinque Terre

15.19 K

Cinque Terre

5

ಸಂಬಂಧಿತ ಸುದ್ದಿ