ಕಾರ್ಕಳ: ದಕ್ಷಿಣ ಕನ್ನಡ- ಉಡುಪಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು ,ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು ಮತದಾನದಲ್ಲಿ ಪಾಲ್ಗೊಂಡಿದ್ದಾರೆ. ಕಾರ್ಕಳ ಪುರಸಭೆಯ ಮತಗಟ್ಟೆಯಲ್ಲಿ ಇಂಧನ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಮತ ಚಲಾಯಿಸಿದರು.ಇತ್ತ ಉಡುಪಿಯ ನಗರಸಭೆಯಲ್ಲಿ ಶಾಸಕ ರಘುಪತಿ ಭಟ್ ತಮ್ಮ ಹಕ್ಕು ಚಲಾಯಿಸಿದರು.
ಬಳಿಕ ಮಾತನಾಡಿದ ಶಾಸಕ ರಘುಪತಿ ಭಟ್, ಬಿಜೆಪಿ ಸದಸ್ಯರು ತಮ್ಮ ಮೊದಲ ಪ್ರಾಶಸ್ತ್ಯದ ಮತ ಚಲಾಯಿಸಿ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸುತ್ತೇವೆ.ಕಾಂಗ್ರೆಸ್ ನ ಕೆಲ ಮತದಾರರೂ ನಮಗೆ ಮತ ಚಲಾಯಿಸಲಿದ್ದಾರೆ ಎಂದು ಹೇಳಿದರು.
Kshetra Samachara
10/12/2021 12:03 pm