ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ವಿಧಾನ ಪರಿಷತ್ ಚುನಾವಣೆ: ಜಿಲ್ಲೆಯಲ್ಲಿ 99.48 % ಮತದಾನ

ಕುಂದಾಪುರ: ಜಿಲ್ಲೆಯಲ್ಲಿ ಇಂದು ನಡೆದ ವಿಧಾನ ಪರಿಷತ್ತಿನ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಒಟ್ಟು 99.48% ಮತದಾನ ನಡೆದಿದೆ. ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ 1203 ಪುರುಷ 1289 ಮಹಿಳಾ ಸದಸ್ಯರು ಸೇರಿದಂತೆ ಒಟ್ಟು 2492 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಬೆಳಗ್ಗೆ 8 ಗಂಟೆಗೆ ಆರಂಭಗೊ೦ಡ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿದ್ದು, 10 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 43.91 % ಮತದಾನ ನಡೆದಿದ್ದು, 2505 ಮಂದಿ ಮತದಾರರಲ್ಲಿ 1100 ಮಂದಿ ಮತದಾನ ಮಾಡಿದ್ದರು. ಕುಂದಾಪುರ ತಾಲೂಕಿನ ಆಲೂರು, ಚಿತ್ತೂರು, ಉಳ್ಳೂರು, ಹಾರ್ದಳ್ಳಿ-ಮಂಡಳ್ಳಿ ,ಬ್ರಹ್ಮಾವರ ತಾಲೂಕಿನ ಕೋಟತಟ್ಟು,ಬಾರ್ಕೂರು. ಹೆಬ್ರಿ ತಾಲೂಕಿನ ಮಾಡಾಮಕ್ಕಿ,ನಾಡ್ಪಾಲು, ಕಾರ್ಕಳ ತಾಲೂಕಿನ ಎರ್ಲಪಾಡಿ,ಹಿರ್ಗಾನ, ಕೆರ್ವಾಶೆ, ದುರ್ಗಾ, ಪಳ್ಳಿ,ನಿಟ್ಟೆ,ನಲ್ಲೂರು,ರೆಂಜಾಳ,ಬೋಳ,ನಂದಳಿಕೆ,ಮುಂಡ್ಕೂರು ಗ್ರಾಮ ಪಂಚಾಯತ್ ಗಳಲ್ಲಿ ಎಲ್ಲ ಮತದಾರರು ಮತ ಚಲಾಯಿಸಿದ್ದು, 100% ಮತದಾನ ನಡೆದಿದೆ.

ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಚುನಾವಣಾ ಆಯೋಗ ಸೂಚಿಸಿರುವ ಎಲ್ಲ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಪಾಲಿಸಲಾಗಿತ್ತು.ಮತದಾನ ಪ್ರಕ್ರಿಯೆ ನಡೆದ ಎಲ್ಲ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿತ್ತು.

Edited By : Nagesh Gaonkar
Kshetra Samachara

Kshetra Samachara

10/12/2021 05:40 pm

Cinque Terre

8.83 K

Cinque Terre

0

ಸಂಬಂಧಿತ ಸುದ್ದಿ