ಮುಲ್ಕಿ: ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಗ್ರಹಣ ಸಮಾರಂಭ ಕಿನ್ನಿಗೋಳಿಯ ರಾಜಾಂಗಣ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ಉದ್ಘಾಟಿಸಿ ಮಾತನಾಡಿ,ಕಾರ್ಯಕರ್ತರೇ ಪಕ್ಷದ ಆಸ್ತಿಯಾಗಿದ್ದು ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿಗರ ದಬ್ಬಾಳಿಕೆ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ಸಿಗರು ಮುಂದಾಗಬೇಕು.
ಕ್ಷೇತ್ರದಲ್ಲಿ ಬಿಜೆಪಿಗರ ಮರಳು ಮಾಫಿಯಾ ಗೆ ಮುಲ್ಕಿ ಪೊಲೀಸರು ಬೆಂಬಲ ನೀಡುತ್ತಿದ್ದು ಕೂಡಲೇ ನಿಲ್ಲಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ವಹಿಸಿದ್ದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಯುವನಾಯಕ ಮಿಥುನ್ ರೈ ನಡೆಸಿಕೊಟ್ಟರು.
ವೇದಿಕೆಯಲ್ಲಿ ಮುಖ್ಯಅತಿಥಿಗಳಾಗಿ ಮಾಜಿ ಸಚಿವ ಯುಟಿ ಖಾದರ್ ಮಾತನಾಡಿ ಸೋದರತೆ ಮತ್ತು ಜಾತ್ಯಾತೀತ ಮನೋಭಾವನೆಯಿಂದ ಗ್ರಾಮ ಗ್ರಾಮಗಳಲ್ಲಿ ಪಕ್ಷ ಬಲಪಡಿಸಲು ಮಾಡಬೇಕು. ಬಿಜೆಪಿಯಂತಹ ಕೋಮುವಾದಿ ಶಕ್ತಿಗಳನ್ನು ದೂರವಿಡಲು ಎಲ್ಲರೂ ಕೈಜೋಡಿಸಬೇಕು. ಮುಂದಿನ ದಿನಗಳಲ್ಲಿ ಬಿಜೆಪಿ ಸರಕಾರ ಮಾಡುತ್ತಿರುವ ಅನ್ಯಾಯಗಳ ವಿರುದ್ಧ ಬೃಹತ್ ಹೋರಾಟಕ್ಕೆ ವೇದಿಕೆ ಸಜ್ಜಾಗಬೇಕು ಎಂದು ಕರೆ ನೀಡಿದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ದ.ಕ. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಕಿನ್ನಿಗೋಳಿ ಕಾಂಗ್ರೆಸ್ ಪ.ಪಂ ಪ್ರಜಾಪ್ರತಿನಿಧಿ ಅಧ್ಯಕ್ಷ ಪ್ರಮೋದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶೈಲಾ ಸಿಕ್ವೇರ, ಕಾರ್ಪೋರೇಟರ್ ವಿನಯ ರಾಜ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ವರ್ಕ್ ಬೋರ್ಡ್ ಮಾಜಿ ಸದಸ್ಯ ಹಸನಬ್ಬ ಮಂಗಳಪೇಟೆ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಟಿ. ಎಚ್.ಮಯ್ಯದ್ದಿ, ಪ್ರಧಾನ ಕಾರ್ಯದರ್ಶಿಟಿ. ಕೆ. ಅಬ್ದುಲ್ ಖಾದರ್ ಮತ್ತಿತರರು ಉಪಸ್ಥಿತರಿದ್ದರು.
ಅನಿತಾ ಅರಾಹ್ನ ಧನ್ಯವಾದ ಅರ್ಪಿಸಿದರು. ಶರತ್ ಶೆಟ್ಟಿ ಕಿನ್ನಿಗೋಳಿ ನಿರೂಪಿಸಿದರು.
Kshetra Samachara
11/12/2021 01:22 pm