ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಸಿಎಂ ಕಾರಣ; ಎಸ್ ಡಿಪಿಐ

ಮಂಗಳೂರು: ಕೆಲ ತಿಂಗಳ ಹಿಂದೆ ದ.ಕ. ಜಿಲ್ಲೆಗೆ ಭೇಟಿ ನೀಡಿದ್ದ ರಾಜ್ಯದ ಸಿಎಂ ಕ್ರಿಯೆಗೆ - ಪ್ರತಿಕ್ರಿಯೆ ಎಂದು ಹೇಳಿಕೆ ನೀಡಿದ ಬಳಿಕ ಜಿಲ್ಲೆಯಲ್ಲಿ ಕಿಡಿಗೇಡಿಗಳಿಂದ ಚೂರಿ ಇರಿತ, ಹಲ್ಲೆ, ನೈತಿಕ ಪೊಲೀಸ್ ಗಿರಿ ಪ್ರಕರಣ ಹೆಚ್ಚಿದೆ. ಆದ್ದರಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ಅಹಿತಕರ ಘಟನೆಗಳಿಗೆ ಸಿಎಂ ಕಾರಣ ಎಂದು ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿಂದು ಮಾತನಾಡಿದ ಅವರು, ಸಂಘ ಪರಿವಾರದ ಮುಖಂಡರು ಪ್ರಚೋದನಕಾರಿ ಭಾಷಣ ಮಾಡಿ ಜಿಲ್ಲಾಧಿಕಾರಿ, ಜಿಲ್ಲಾ ಉಪ ಪೊಲೀಸ್ ನಿರೀಕ್ಷಕರ ಬಗ್ಗೆ ಅವಹೇಳಕಾರಿ ಮಾತು ಬಳಸುತ್ತಿದ್ದಾರೆ. ಅಲ್ಲದೆ, ಸಮುದಾಯವೊಂದನ್ನು ಗುರಿಯಾಗಿಸಿ ಸಂಘ ಪರಿವಾರದವರಿಂದ ಹಲ್ಲೆ, ಚೂರಿ ಇರಿತ, ಬೆದರಿಕೆ ಕೃತ್ಯ ನಿರಂತರ ನಡೆಯುತ್ತಲೇ ಇದೆ. ಬಿಜೆಪಿ ನಾಯಕರು ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಕಿಡಿಗೇಡಿಗಳ ಮೂಲಕ ವಿಧ್ವಂಸಕ ಕೃತ್ಯ ನಡೆಸಿ ಜನರನ್ನು ಭಾವನಾತ್ಮಕವಾಗಿ ವಿಭಜಿಸಿ ರಾಜಕೀಯ ಲಾಭ ಗಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು.

ತ್ರಿಶೂಲ ವಿತರಣೆ ಬಳಿಕ ಕಿಡಿಗೇಡಿಗಳಿಂದ ಗಲಭೆ ಅಧಿಕವಾಗುತ್ತಿದೆ. ಆದರೆ, ಪೊಲೀಸ್ ಇಲಾಖೆ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಸಂಪೂರ್ಣ ವಿಫಲಗೊಂಡಿದೆ ಎಂದು ಅಬೂಬಕ್ಕರ್ ಕುಳಾಯಿ ಟೀಕಿಸಿದರು.

Edited By : Manjunath H D
Kshetra Samachara

Kshetra Samachara

12/12/2021 09:40 am

Cinque Terre

10.49 K

Cinque Terre

2

ಸಂಬಂಧಿತ ಸುದ್ದಿ