ಮುಲ್ಕಿ:ಕಿನ್ನಿಗೋಳಿ ಪಟ್ಟಣ ಪಂಚಾಯತ್ ರದ್ದತಿಗಾಗಿ ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ವಠಾರದಲ್ಲಿ ಕೊಡೆತ್ತೂರು ಮಾಗಣೆಯ ಮತ್ತು ಕಿಲೆಂಜೂರು ಗ್ರಾಮಸ್ಥರ ಬ್ರಹತ್ ಸಭೆ ನಡೆಯಿತು. ಕಿನ್ನಿಗೋಳಿ ಪಟ್ಟಣ ಪಂಚಾಯತ್ ರಚನೆಯ ಸಾಧಕ ಬಾಧಕಗಳ ಬಗ್ಗೆ ವಿವರವಾಗಿ ಚರ್ಚಿಸಲಾಗಿ, ಕಿನ್ನಿಗೋಳಿ ಪಟ್ಟಣ ಪಂಚಾಯತ್ ರದ್ದು ಮಾಡಲು ಹೋರಾಟದ ತೀರ್ಮಾನಕ್ಕೆ ಬರಲಾಯಿತು ಹಾಗೂ ಕಾನೂನಾತ್ಮಕ ಹೋರಾಟಕ್ಕೆ ಸಮಿತಿಯನ್ನು ರಚಿಸಲಾಯಿತು.
ಸಭೆಯಲ್ಲಿ ನಾಗರಿಕ ಸಮಿತಿಯ ದೇವಿಪ್ರಸಾದ್ ಶೆಟ್ಟಿ ಮಾತನಾಡಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ರದ್ದತಿಗೆ ಹೋರಾಟ ನಿರಂತರವಾಗಿ ಮುಂದಿನ ದಿನಗಳಲ್ಲಿ ನಡೆಯಲಿದ್ದು ಗ್ರಾಮಸ್ಥರ ಸಹಕಾರ ಅಗತ್ಯ ಎಂದರು.
ಕಿನ್ನಿಗೋಳಿ ಪಟ್ಟಣ ಪಂಚಾಯತ್ ರದ್ಗತಿ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದು, ಹಾಗೂ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್, ಸಂಸದ ನಳಿನ್ ಕುಮಾರ್ ಕಟೀಲ್ ರವರ ಮನವೊಲಿಸಿ ಪಟ್ಟಣ ಪಂಚಾಯತಿ ಯನ್ನು ರದ್ದು ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ನ್ಯಾಯಾಲಯಕ್ಕೆ ದೂರು ಸಲ್ಲಿಸಲು ಏಳು ಜನರ ಸಮಿತಿಯನ್ನು ಮಾಡಲಾಯಿತು. ಹಾಗೂ ಹೋರಾಟದ ರೂಪುರೇಷೆಗಳನ್ನು ಚರ್ಚಿಸಿ ಒಗ್ಗಟ್ಟಾಗಿ ಹೋರಾಟಕ್ಕೆ ತೀರ್ಮಾನಿಸಲಾಯಿತು.
Kshetra Samachara
13/12/2021 04:06 pm